HomeLatest NewsBIG NEWS: ಮೂಡಬಿದರೆ ಇನ್ಸ್ ಪೆಕ್ಟರ್ ಸಂದೇಶ್ ಮತ್ತಷ್ಟು ಕರಾಳ ಮುಖ ಬಯಲು: ಸಂತ್ರಸ್ತೆಯ ಮಗಳ...

BIG NEWS: ಮೂಡಬಿದರೆ ಇನ್ಸ್ ಪೆಕ್ಟರ್ ಸಂದೇಶ್ ಮತ್ತಷ್ಟು ಕರಾಳ ಮುಖ ಬಯಲು: ಸಂತ್ರಸ್ತೆಯ ಮಗಳ ಮೇಲೂ ಕಣ್ಣು: ಆಡಿಯೋ ವೈರಲ್

ಮಂಗಳೂರು: ದೂರು ನೀಡಲು ಬಂದಿದ್ದ ಮಹಿಳೆಯ ಮೇಲೆಯೇ ಲೈಂಗಿಕ ದೌರ್ಜನ್ಯವೆಸಗಿದ ಮೂಡಬಿದರೆ ಇನ್ಸ್ ಪೆಕ್ಟರ್ ಸಂದೇಶ್ ಪಿಜಿಯ ಮತ್ತಷ್ಟು ಕಾಮಕಾಂಡಗಳು ಬಯಲಾಗಿವೆ. ಸಂತ್ರಸ್ತೆಯ ಅಪ್ರಾಪ್ತ ಮಗಳ ಮೇಲೂ ಕಾಮುಕ ಇನ್ಸ್ ಪೆಕ್ಟರ್ ಕಣ್ಣು ಹಾಕಿದ್ದು, ಬೆದರಿಕೆ ಹಾಕಿದ್ದಾನೆ ಎನ್ನಲಾದ ಆಡಿಯೋ ವೈರಲ್ ಆಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆ ಇನ್ಸ್‌ಪೆಕ್ಟರ್ ಸಂದೇಶ್ ಪಿಜಿ ವಿರುದ್ಧ ಲೈಂಗಿಕ ಕಿರುಕುಳ ಹಾಗೂ ಭ್ರಷ್ಟಾಚಾರದ ಆರೋಪಗಳು ಕೇಳಿಬಂದಿವೆ. ಕೌಟುಂಬಿಕ ವ್ಯಾಜ್ಯದ ಬಗ್ಗೆ ದೂರು ನೀಡಲು ಬಂದ ಮಹಿಳೆಯನ್ನು ಬ್ಲ್ಯಾಕ್‌ಮೇಲ್ ಮಾಡಿ ಲೈಂಗಿಕವಾಗಿ ಬಳಸಿಕೊಂಡಿರುವ ಆರೋಪ ಕೇಳಿಬಮ್ದಿದೆ. ಸಂತ್ರಸ್ತೆಯೊಬ್ಬಳ ಗಂಡನನ್ನು ಕೇಸ್‌ನಲ್ಲಿ ಸಿಲುಕಿಸಿ, ಆತನನ್ನು ಬಿಡುಗಡೆ ಮಾಡಲು ‘ನನ್ನ ಜೊತೆ ಮಲಗಬೇಕು ಅಥವಾ 25 ಲಕ್ಷ ರೂಪಾಯಿ ನೀಡಬೇಕು’ ಎಂದು ಇನ್ಸ್‌ಪೆಕ್ಟರ್ ಧಮಕಿ ಹಾಕಿದ್ದಾನೆ. ಅಲ್ಲದೇ ನಾನು ಪೋಸ್ಟಿಂಗ್‌ಗಾಗಿ ಗೃಹಸಚಿವರಿಗೆ 50 ಲಕ್ಷ ನೀಡಿ ಬಂದಿದ್ದೇನೆ ಎಂದು ಹೇಳಿಕೊಂಡಿದಾನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಲ್ಲದೇ ಇನ್ಸ್‌ಪೆಕ್ಟರ್‌ ಸಂದೇಶ್ ತಾನು ಲೈಂಗಿಕವಾಗಿ ಬಳಸಿಕೊಂಡ ಮಹಿಳೆಯೊಬ್ಬರ ಅಪ್ರಾಪ್ತ ಮಗಳ ಮೇಲೂ ಕೆಟ್ಟದೃಷ್ಟಿ ಬೀರಿದ್ದಾರೆ. ಆಕೆ ಓದುತ್ತಿರುವ ಕಾಲೇಜಿಗೆ ಹೋಗುತ್ತೇನೆ ಎಂದು ಫೋನ್‌ನಲ್ಲಿ ಸಂತ್ರಸ್ತೆಗೆ ಬೆದರಿಕೆ ಹಾಕಿದ್ದಾನೆ. ಈ ಆರೋಪಕ್ಕೆ ಸಂಬಂಧಿಸಿದ ಆಡಿಯೋವೊಂದು ವೈರಲ್ ಆಗಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಇನ್ಸ್ ಪೆಕ್ಟರ್ ಸಂದೇಶ್ ವಿರುದ್ಧ ಕೆಲವು ತಿಂಗಳುಗಳಿಂದ ಹಿರಿಯ ಅಧಿಕಾರಿಗಳಿಗೆ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿರಲಿಲ್ಲ ಎಂಬ ಆರೋಪವೂ ಇದೆ. ಹಿರಿಯ ಅಧಿಕಾರಿಗಳೇ ಈತನನ್ನು ರಕ್ಷಿಸುತ್ತಿದ್ದಾರೆ ಎಂದು ಹೇಳಲಗುತ್ತಿದೆ. ಇದೀಗ ಪ್ರಕರಣದ ತೀವ್ರತೆ ಅರಿತ ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ತನಿಖೆಗೆ ಆದೇಶಿಸಿದ್ದಾರೆ. ಉತ್ತರ ವಿಭಾಗದ ಎಸಿಪಿ ಶ್ರೀಕಾಂತ್ ಅವರಿಗೆ ತನಿಖೆ ನಡೆಸಿ ವರದಿ ನೀಡುವಂತೆ ಸೂಚಿಸಿದ್ದಾರೆ.

ಈವರೆಗೂ ಯಾವೊಬ್ಬ ಮಹಿಳೆಯೂ ಅಧಿಕೃತವಾಗಿ ಲೈಂಗಿಕ ಕಿರುಕುಳದ ಬಗ್ಗೆ ದೂರು ನೀಡಿಲ್ಲ. ಯಾರಾದರೂ ಸಂತ್ರಸ್ತೆಯರಿದ್ದರೆ ಧೈರ್ಯವಾಗಿ ಬಂದು ದೂರು ನೀಡಿ, ನಾವು ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ಕಮಿಷನರ್ ಮನವಿ ಮಾಡಿದ್ದಾರೆ. ಮತ್ತೊಂದೆಡೆ, ಸಂತ್ರಸ್ತೆ ಸಿಎಂ, ಗೃಹ ಸಚಿವರು ಮತ್ತು ಮಹಿಳಾ ಆಯೋಗಕ್ಕೂ ದೂರು ನೀಡಿರುವುದಾಗಿ ಹೇಳಿದ್ದು, ತನಗೆ ನ್ಯಾಯ ಒದಗಿಸುವಂತೆ ಮನವಿ ಮಾಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular