HomeKarnatakaಮಾಜಿ ಸಂಸದ ಮುದ್ದಹನುಮೇಗೌಡ ಇಂದು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ

ಮಾಜಿ ಸಂಸದ ಮುದ್ದಹನುಮೇಗೌಡ ಇಂದು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು: ತುಮಕೂರು ಕ್ಷೇತ್ರದ ಮಾಜಿ ಸಂಸದ ಎಸ್.ಪಿ. ಮುದ್ದಹನುಮೇಗೌಡ ಇಂದು ಬಿಜೆಪಿ ತೊರೆದು ಕಾಂಗ್ರೆಸ್ ಗೆ ಸೇರ್ಪಡೆಯಾಗಲಿದ್ದಾರೆ,

ಕಳೆದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ -ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದರಿಂದ ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಸ್ಪರ್ಧಿಸಿದ್ದರು. ಹಾಲಿ ಸಂಸದರಾಗಿದ್ದರೂ ಮುದ್ದಹನುಮೇಗೌಡರಿಗೆ ಟಿಕೆಟ್ ಕೈತಪ್ಪಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕುಣಿಗಲ್ ನಿಂದ ಕಾಂಗ್ರೆಸ್ ಟಿಕೆಟ್ ಬಯಸಿದ್ದ ಅವರು ಟಿಕೆಟ್ ಸಿಗದ ಕಾರಣ ಬಿಜೆಪಿ ಸೇರ್ಪಡೆಯಾಗಿದ್ದರು. ಬಿಜೆಪಿಯಲ್ಲಿಯೂ ಟಿಕೆಟ್ ಸಿಕ್ಕಿರಲಿಲ್ಲ. ಈಗ ಕಾಂಗ್ರೆಸ್ ಸೇರಿ ತುಮಕೂರಿನಿಂದ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎನ್ನಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular