HomeLatest NewsBIG NEWS : ರಾಜ್ಯದ ಈ ಜಿಲ್ಲೆಯಲ್ಲಿ 'ಮೊಹರಂ' ಹಬ್ಬ ನಿಷೇಧ, ಪ್ರತಿಬಂಧಕಾಜ್ಞೆ ಜಾರಿ.!

BIG NEWS : ರಾಜ್ಯದ ಈ ಜಿಲ್ಲೆಯಲ್ಲಿ ‘ಮೊಹರಂ’ ಹಬ್ಬ ನಿಷೇಧ, ಪ್ರತಿಬಂಧಕಾಜ್ಞೆ ಜಾರಿ.!

ಬಳ್ಳಾರಿ : ಜಿಲ್ಲೆಯಾದ್ಯಾಂತ ಜೂನ್ 27 ರಿಂದ ಜುಲೈ 07 ರವರೆಗೆ ಜರುಗುವ ಮೊಹರಂ ಹಬ್ಬದ ಆಚರಣೆಯನ್ನು ಜಿಲ್ಲೆಯ ವಿವಿಧ ತಾಲ್ಲೂಕಿನ ಕೆಲ ಗ್ರಾಮಗಳಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ ನಿಷೇಧಿಸಿ ಬಳ್ಳಾರಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಆದೇಶ ಹೊರಡಿಸಿದ್ದಾರೆ.

ಮೊಹರಂ ಹಬ್ಬದ ಆಚರಣೆಯ ಸಂದರ್ಭದಲ್ಲಿ ವಿವಿಧ ತಾಲ್ಲೂಕುಗಳ ಕೆಲ ಗ್ರಾಮಗಳಲ್ಲಿ ವೈಶಮ್ಯ ಇರುವುದರಿಂದ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹಾಗೂ ಮೊಹರಂ ಆಚರಿಸುವ ಸಂದರ್ಭದಲ್ಲಿ ಶಾಂತಿ ಮತ್ತು ಸುವ್ಯಸ್ಥೆಗೆ ಧಕ್ಕೆ ಉಂಟಾಗುವ ಬಗ್ಗೆ ವರದಿಗಳು ಇರುವುದರಿಂದ ಮುಂಜಾಗೃತ ಕ್ರಮಗಳನ್ನು ತೆಗೆದುಕೊಳ್ಳಬೇಕಾಗಿದ್ದು, ಪೊಲೀಸ್ ಬಂದೋಬಸ್ತ್ ಪರಿಣಾಮಕಾರಿಯಾಗಿ ಜಾರಿಗೆ ತರಲು ಕರ್ನಾಟಕ ಪೊಲೀಸ್ ಕಾಯ್ದೆ 1963ರ ಕಲಂ 35 (ಎ) (ಬಿ) (ಡಿ) (ಇ) ರನ್ವಯ ಪ್ರದತ್ತವಾದ ಅಧಿಕಾರ ಚಲಾಯಿಸಿ ಜಿಲ್ಲಾಧಿಕಾರಿಗಳು, ಜೂನ್ 27 ರಿಂದ ಜುಲೈ 07 ರವರೆಗೆ ಆಚರಿಸಲ್ಪಡುವ ಮೊಹರಂ ಹಬ್ಬವನ್ನು ಜಿಲ್ಲೆಯ ವಿವಿಧ ತಾಲ್ಲೂಕುಗಳ ಕೆಲ ಗ್ರಾಮಗಳಲ್ಲಿ ನಿಷೇಧಿಸಲಾಗಿದೆ. ಈ ಸಂದರ್ಭದಲ್ಲಿ ಸಾರ್ವಜನಿಕವಾಗಿ ಜನರು ಗುಂಪು ಸೇರದಂತೆ ಮೆರವಣಿಗೆ ನಡೆಸದಂತೆ ಮತ್ತು ಪಂಜಾಗಳನ್ನು ಕೂಡಿಸದಂತೆ ಮೊಹರಂ ಹಬ್ಬವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಅವರು ಆದೇಶದಲ್ಲಿ ಸ್ಪಷ್ಟಪಡಿಸಿದ್ದಾರೆ.

ಮೊಹರಂ ಹಬ್ಬ ನಿಷೇಧಿಸಲ್ಪಟ್ಟ ಗ್ರಾಮಗಳು:
ಬಳ್ಳಾರಿಯ ಗಾಂಧಿನಗರ ಪೊಲೀಸ್ ಠಾಣೆ ವ್ಯಾಪ್ತಿಯ ತಾಳೂರು ರಸ್ತೆಯ ಕನ್ನಡ ನಗರ ಮುಖ್ಯ ರಸ್ತೆಯ (ನ್ಯಾಯಾಧೀಶರ ವಸತಿಗೃಹ ಕಾಂಪೌಂಡ್ ಪಕ್ಕದಲ್ಲಿ) ಮಹಾನಂದಿಕೊಟ್ಟ ಒಳಗಡೆ.
ಸಿರುಗುಪ್ಪ ಪೊಲೀಸ್ ಠಾಣೆ ವ್ಯಾಪ್ತಿಯ ಕೆ.ಸೂಗೂರು, ಮುದೇನೂರು, ಹೀರೆಹಾಳ್, ನಾಡಂಗ, ಬಂಡ್ರಾಳ್, ದೇಶನೂರು, ಕೆ.ಬೆಳಗಲ್, ಅಲಬನೂರು ಗ್ರಾಮಗಳು. ತೆಕ್ಕಲಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯ ತೆಕ್ಕಲಕೋಟೆ, ಹಳೇಕೋಟೆ, ಉಪ್ಪಾರಹೊಸಳ್ಳಿ, ಉಡೇಗೋಳ, ಅರಳಿಗನೂರು ಗ್ರಾಮಗಳು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಿರಿಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ಸಿರಿಗೇರಿ, ಕೂರಿಗನೂರು, ತಾಳೂರು, ಕರೂರು ಗ್ರಾಮಗಳು. ಪಿಡಿ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಅಸುಂಡಿ ಗ್ರಾಮ.ಕಂಪ್ಲಿ ಪೊಲೀಸ್ ಠಾಣೆ ವ್ಯಾಪ್ತಿಯ ನಂ.15-ಗೋನಾಳು ಗ್ರಾಮದಲ್ಲಿ ನಿಷೇಧಿಸಲಾಗಿದೆ ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.

ನಿಷೇಧಿಸಲಾದ ಚಟುವಟಿಕೆಗಳು:
ಕರ್ನಾಟಕ ಪೊಲೀಸ್ ಕಾಯ್ದೆ 1963ರ ಕಲಂ 35(ಎ)ರಡಿ ಶಸ್ತç, ಬಡಿಗೆ, ಬರ್ಚಿ, ಗದೆ, ಬಂದೂಕು, ಚೂರಿ, ಕೋಲು, ಲಾಠಿ ಅಥವಾ ಶರೀರಕ್ಕೆ ಗಾಯ ಮಾಡಲು ಉಪಯೋಗಿಸಬಹುದಾದ ಯಾವುದೇ ವಸ್ತುವನ್ನು ಒಯ್ಯುವುದು. ಯಾವುದೇ ದಾಹಕ(ನಾಶಕಾರಿ) ಪದಾರ್ಥ ಇಲ್ಲವೇ ಸ್ಪೋಟಕ ವಸ್ತು ಒಯ್ಯುವುದು.

ಯಾವುದೇ ವ್ಯಕ್ತಿಗಳ ಭಾವ ಚಿತ್ರಗಳನ್ನು ಅವಮಾನಕಾರ ರೀತಿಯಲ್ಲಿ ಪ್ರದರ್ಶಿಸಬಾರದು. ಬಹಿರಂಗವಾಗಿ ಘೋಷಣೆ ಮಾಡುವುದನ್ನು, ಪದ ಹಾಡುವುದನ್ನು, ವಾದ್ಯ ಬಾರಿಸುವುದನ್ನು, ವ್ಯಾಖ್ಯಾನ ಕೊಡುವುದನ್ನು, ಸನ್ನೆ ಪ್ರದರ್ಶನವನ್ನು, ಆ ಆಫೀಸರರ ಅಭಿಪ್ರಾಯದಲ್ಲಿ ಸಭ್ಯತೆ ಅಥವಾ ನೀತಿಯನ್ನು ಅತಿಕ್ರಮಿಸಬಹುದಾದ ಯಾವುದೇ ವಸ್ತು ಅಥವಾ ತಯಾರಿ ಪ್ರದರ್ಶನ ಅಥವಾ ಪ್ರಸಾರವನ್ನು ಪ್ರತಿಬಂಧಿಸುವುದು ಹಾಗೂ ಗುಂಪುಗೂಡಿ ಮೆರವಣಿಗೆ ಮಾಡುವುದು.

ಈ ಪ್ರತಿಬಂಧಕ ಆಜ್ಞೆಗೆ ವಿರುದ್ಧವಾಗಿ ಯಾರೊಬ್ಬರು ವರ್ತಿಸಿದರೆ, ಅವರು ಯಾವುದೇ ಪೊಲೀಸ್ ಅಧಿಕಾರಿಗಳಿಂದ ಇಂತಹ ವಸುಗಳನ್ನು ವಶ ಪಡಿಸಿಕೊಳ್ಳಲು ಪಾತ್ರರಾಗುವರು ಹಾಗೂ ಈ ರೀತಿ ಪಡೆಯಲ್ಪಟ್ಟ ಪದಾರ್ಥ ಸರ್ಕಾರಕ್ಕೆ ಜಮಾ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular