ವೃತ್ತಿಪರ ಕೋರ್ಸ್ ಪ್ರವೇಶ CET ಫಲಿತಾಂಶ ಪ್ರಕಟಕ್ಕೆ ಮುಹೂರ್ತ ಫಿಕ್ಸ್: ಮೇ 22 ಅಥವಾ 23ರಂದು ರಿಸಲ್ಟ್

ಬೆಂಗಳೂರು: ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ವತಿಯಿಂದ ನಡೆಸಲಾಗಿದ್ದ ಸಿಇಟಿ ಫಲಿತಾಂಶ ಮೇ 22 ಅಥವಾ 23ರಂದು ಪ್ರಕಟವಾಗಲಿದೆ.

ಏಪ್ರಿಲ್ 16ರಂದು ಭೌತವಿಜ್ಞಾನ, ರಸಾಯನ ವಿಜ್ಞಾನ, ಏಪ್ರಿಲ್ 17ರಂದು ಗಣಿತ ಮತ್ತು ಜೀವವಿಜ್ಞಾನ ವಿಷಯಗಳ ಪರೀಕ್ಷೆಗಳನ್ನು 775 ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಗಿತ್ತು. ಗಡಿನಾಡು ಮತ್ತು ಹೊರನಾಡು ಕನ್ನಡಿಗ ಅಭ್ಯರ್ಥಿಗಳಿಗೆ 15 ರಂದು ಕನ್ನಡ ಭಾಷಾ ಪರೀಕ್ಷೆ ನಡೆಸಲಾಗಿತ್ತು. ಕೇರಳ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪರೀಕ್ಷೆ ಬರೆದಿದ್ದರು. ಕೇರಳ ಪದವಿ ಪೂರ್ವ ಶಿಕ್ಷಣ ಇಲಾಖೆ ಮೇ 21ರಂದು ಪಿಯು ಫಲಿತಾಂಶ ಪ್ರಕಟಿಸಲಿದ್ದು, ಫಲಿತಾಂಶ ಪ್ರಕಟವಾದ ಒಂದು ಅಥವಾ ಎರಡು ದಿನದಲ್ಲಿ ಸಿಇಟಿ ರ್ಯಾಂಕಿಂಗ್ ಬಿಡುಗಡೆ ಮಾಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕ್ರಮ ಕೈಗೊಂಡಿದೆ.

ದ್ವಿತೀಯ ಪಿಯುಸಿ ಪರೀಕ್ಷೆ -1 ಮತ್ತು ಪರೀಕ್ಷೆ -2ರ ಫಲಿತಾಂಶ, ಸಿಬಿಎಸ್ಇ, ಐಸಿಎಸ್ಇ ಫಲಿತಾಂಶ ಕೂಡ ಪ್ರಕಟವಾಗಿದೆ. ಅಭ್ಯರ್ಥಿಗಳು ಪಡೆದ ಅಂಕಗಳ ಕೂಡುವಿಕೆ ಕಾರ್ಯವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪೂರ್ಣಗೊಳಿಸಿದೆ. ಬಹುತೇಕ ಮೇ 22 ಅಥವಾ 23 ರಂದು ಸಿಇಟಿ ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read