ಬಿಹಾರದಲ್ಲಿ NDA ಸರ್ಕಾರ ರಚನೆಗೆ ಮುಹೂರ್ತ ಫಿಕ್ಸ್: 10ನೇ ಬಾರಿಗೆ ಮುಖ್ಯಮಂತ್ರಿಯಾಗಿ ನಾಳೆ ನಿತೀಶ್ ಪ್ರಮಾಣ ವಚನ

ಪಾಟ್ನಾ: ಬಿಹಾರದಲ್ಲಿ ಎನ್.ಡಿ.ಎ. ಸರ್ಕಾರ ರಚನೆಗೆ ಮೂಹೂರ್ತ ನಿಗದಿಯಾಗಿದೆ. ನಾಳೆ ಬಿಹಾರ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಪದಗ್ರಹಣ ಮಾಡಲಿದ್ದಾರೆ.

10ನೇ ಬಾರಿಗೆ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ರಾಜ್ಯಪಾಲ ಆರೀಫ್ ಮೊಹಮ್ಮದ್ ಖಾನ್ ಅವರು ಪ್ರಮಾಣ ವಚನ ಬೋಧಿಸಲಿದ್ದಾರೆ. ಪಾಟ್ನಾದ ಗಾಂಧಿ ಮೈದಾನದಲ್ಲಿ ಸಮಾರಂಭ ನಡೆಯಲಿದ್ದು, ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ, ಕೇಂದ್ರ ಸಚಿವ ಅಮಿತ್ ಶಾ ಹಲವು ಹಿರಿಯ ನಾಯಕರು ಭಾಗವಹಿಸಲಿದ್ದಾರೆ.

ಬಿಜೆಪಿ, ಜೆಡಿಯು ಸೇರಿದಂತೆ ಎನ್.ಡಿ.ಎ. ಮಿತ್ರಪಕ್ಷಗಳ ನಾಯಕರು ನಿತೀಶ್ ಕುಮಾರ್ ಪದಗ್ರಹಣ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read