ಅಕ್ಟೋಬರ್ 2 ರಿಂದ 1 ತಿಂಗಳ ಕಾಲ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ನಡೆಸಲು ತೀರ್ಮಾನಿಸಿದ್ದೇವೆ ಎಂದು ಜಲಮಂಡಳಿ ಅಧ್ಯಕ್ಷ ಡಾ.ರಾಮ್‌ಪ್ರಸಾತ್ ಮನೋಹರ್ ತಿಳಿಸಿದ್ದಾರೆ.
ಇದಕ್ಕಾಗಿ 92 ಕೋಟಿ ರೂ. ಮೀಸಲಿರಿಸಲಾಗಿದೆ. ನಿತ್ಯ ಸುಮಾರು 8 ಸಾವಿರ ಮಂದಿ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗುವುದು. ವಿಶೇಷ ಆಕರ್ಷಣೆಗಾಗಿ ದೀಪಾಲಂಕಾರ ಇರಲಿದೆ. ಪಾರ್ಕಿಂಗ್ ಮತ್ತು ಊಟದ ವ್ಯವಸ್ಥೆಯನ್ನು ಮಾಡಲಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.
ಮಂಡ್ಯ ಜಿಲ್ಲೆಯ ಕೃಷ್ಣರಾಜಸಾಗರ ಬಳಿ ನಡೆಯುವ ಬಹುನಿರೀಕ್ಷಿತ ಕಾವೇರಿ ಆರತಿಗೆ ಮುಹೂರ್ತ ನಿಗದಿಯಾಗಿದ್ದು ಅಕ್ಟೋಬರ್ 2 ರಿಂದ 1 ತಿಂಗಳ ಕಾಲ ಕಾವೇರಿ ಆರತಿ ನಡೆಯಲಿದೆ. ಅಗತ್ಯ ಮೂಲ ಸೌಕರ್ಯ ವ್ಯವಸ್ಥೆಗೆ 92 ಕೋಟಿ ರೂ. ಇಡಲಾಗಿದೆ. ಧಾರ್ಮಿಕ ಮತ್ತು ಸಂಸ್ಕೃತಿಗೆ ಪೂರಕವಾಗಿ ಕಾರ್ಯಕ್ರಮ ವ್ಯವಸ್ಥೆ ಮಾಡಲಾಗಿದೆ.
ಜಲ ಸಂಪನ್ಮೂಲ ಇಲಾಖೆ, ಪ್ರವಾಸೋದ್ಯಮ, ಧಾರ್ಮಿಕ ದತ್ತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಒಂದು ತಿಂಗಳ ಕಾಲ ಪ್ರತಿ ದಿನ 8000 ಮಂದಿಗೆ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ. ವಿಶೇಷ ದೀಪಾಲಂಕಾರ, ಕಾರಂಜಿ ವ್ಯವಸ್ಥೆ ಮಾಡಲಾಗುವುದು. ಪ್ರವಾಸಿಗರನ್ನು ಕಾವೇರಿ ಆರತಿ ಆಕರ್ಷಿಸಲಿದೆ. ಅಕ್ಟೋಬರ್ 2 ರಿಂದ ಪ್ರತಿ ದಿನ ಸಂಜೆ 6ರಿಂದ ರಾತ್ರಿ 9 ಗಂಟೆಯವರೆಗೆ ಒಂದು ತಿಂಗಳ ಕಾಲ ಕಾವೇರಿ ಆರತಿ ವಿವಿಧ ಕಾರ್ಯಕ್ರಮಗಳು ನಡೆಯಲಿವೆ.