HomeKarnatakaBREAKING : ವಿಶ್ವವಿಖ್ಯಾತ 'ಮೈಸೂರು ದಸರಾ' ಮಹೋತ್ಸವಕ್ಕೆ ಮುಹೂರ್ತ ಫಿಕ್ಸ್ |Mysore Dasara 2024

BREAKING : ವಿಶ್ವವಿಖ್ಯಾತ ‘ಮೈಸೂರು ದಸರಾ’ ಮಹೋತ್ಸವಕ್ಕೆ ಮುಹೂರ್ತ ಫಿಕ್ಸ್ |Mysore Dasara 2024

ಬೆಂಗಳೂರು : ವಿಶ್ವ ವಿಖ್ಯಾತ ದಸರಾ ಮಹೋತ್ಸವಕ್ಕೆ ಮುಹೂರ್ತ ಫಿಕ್ಸ್ ಆಗಿದ್ದು, ಮೈಸೂರಿನಲ್ಲಿಅ.3 ರಿಂದ 12 ರವರೆಗೆ ಮೈಸೂರು ದಸರಾ ಮಹೋತ್ಸವ ನಡೆಯಲಿದೆ. ಅ.12 ರಂದು ಜಂಬೂ ಸವಾರಿ ನಡೆಯಲಿದೆ.

ಹೌದು, ಈ ಬಾರಿ ಅದ್ದೂರಿಯಾಗಿ ದಸರಾ ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಅಕ್ಟೋಬರ್ 3 ರಿಂದ 12 ರವರೆಗೆ ದಸರಾ ಮಹೋತ್ಸವ ನಡೆಯಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅ.3 ರಿಂದ 12 ರವರೆಗೆ ಮೈಸೂರು ದಸರಾ ಮಹೋತ್ಸವ ನಡೆಯಲಿದೆ. ಅಕ್ಟೋಬರ್ 3 ರಂದು ಬೆಳಗ್ಗೆ 9 ಗಂಟೆ 10 ನಿಮಿಷಕ್ಕೆ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಪೂಜೆ ನೆರವೇರಿಸಿ ನಂತರ ದಸರಾ ಉದ್ಘಾಟನೆ ಮಾಡಲಾಗುತ್ತಿದೆ. ಅ.12 ರ ಮಧ್ಯಾಹ್ನ 12 :10 ಕ್ಕೆ ಜಂಬೂ ಸವಾರಿ ಆರಂಭವಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಮೈಸೂರು ದಸರಾ ಉದ್ಘಾಟಕರ ಹೆಸರು ಅಂತಿಮವಾಗಿಲ್ಲ. ಮುಂದೆ ಚರ್ಚೆ ನಡೆಸಿ ಯಾರು ದಸರಾ ಉದ್ಘಾಟಿಸಬೇಕೆಂದು ಸರ್ಕಾರ ತೀರ್ಮಾನ ಕೈಗೊಳ್ಳಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular