HomeLatest NewsBREAKING : ವಿಶ್ವ ವಿಖ್ಯಾತ 'ಮೈಸೂರು ದಸರಾ' ಮಹೋತ್ಸವಕ್ಕೆ ಮುಹೂರ್ತ ಫಿಕ್ಸ್ |Mysore Dasara...

BREAKING : ವಿಶ್ವ ವಿಖ್ಯಾತ ‘ಮೈಸೂರು ದಸರಾ’ ಮಹೋತ್ಸವಕ್ಕೆ ಮುಹೂರ್ತ ಫಿಕ್ಸ್ |Mysore Dasara 2025

ಮೈಸೂರು : ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಮುಹೂರ್ತ ಫಿಕ್ಸ್ ಆಗಿದ್ದು , ಈ ಕುರಿತು ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಡಹಬ್ಬ ಮೈಸೂರು ದಸರಾ-2025 ಆಚರಣೆ ಕುರಿತು ವಿಧಾನಸೌಧ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಸಿ ನಂತರ ಮಾಹಿತಿ ನೀಡಿದರು.

ಈ ಬಾರಿ 9 ದಿನದ ಬದಲು 11 ದಿನ ದಸರಾ ಆಚರಣೆಗೆ ನಿರ್ಧರಿಸಿದ್ದೇವೆ. ಸೆಪ್ಟೆಂಬರ್ 22 ರಂದು ಚಾಮುಂಡಿಬೆಟ್ಟದಲ್ಲಿ ದಸರಾ ಮಹೋತ್ಸವಕ್ಕೆ ಚಾಲನೆ ಸಿಗಲಿದೆ . ಸೆ.22 ರಂದು ಬೆಳಗ್ಗೆ 10:10 ಕ್ಕೆ ದಸರಾ ಉದ್ಘಾಟನೆಯಾಗಲಿದೆ ಎಂದರು . ಸೆ.22 ರಿಂದ ಅ.2 ರವರೆಗೆ ದಸರಾ ನಡೆಯಲಿದೆ. ಅ.2 ರಂದು ಜಂಬೂ ಸವಾರಿ ನಡೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಬಾರಿ ರಾಜ್ಯದಲ್ಲಿ ಮಳೆ ಬೆಳೆ ಚೆನ್ನಾಗಿದೆ. ಅಧಿಕ ಪಂಚಮಿ ಬಂದಿರುವುದರಿಂದ 9 ದಿನದ ಬದಲು ಅದ್ದೂರಿಯಾಗಿ 11 ದಸರಾ ಆಚರಿಸಲು ನಿರ್ಧರಿಸಲಾಗಿದೆ ಎಂದು ಅವರು ಹೇಳಿದರು. ಈ ಹಿಂದೆಯೂ 11 ದಿನಗಳ ಕಾಲ ದಸರಾ ನಡೆದಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಸಭೆಯಲ್ಲಿ ಸಚಿವರಾದ ಎಚ್.ಸಿ.ಮಹದೇವಪ್ಪ, ಕೆ.ಜೆ.ಜಾರ್ಜ್, ಶಿವರಾಜ ತಂಗಡಗಿ, ಕೆ.ವೆಂಕಟೇಶ್, ಅಪರ ಮುಖ್ಯ ಕಾರ್ಯದರ್ಶಿ ಗೌರವ ಗುಪ್ತಾ, ಮುಖ್ಯಮಂತ್ರಿ ಅವರ ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್, ಶಾಸಕರಾದ ಜಿ.ಟಿ.ದೇವೇಗೌಡ, ರಮೇಶ್ ಬಂಡಿಸಿದ್ದೇಗೌಡ, ಪುಟ್ಟರಂಗಶೆಟ್ಟಿ, ತನ್ವೀರ್ ಸೇಠ್, ಡಾ.ಯತೀಂದ್ರ ಎಸ್, ಡಾ.ಡಿ.ತಿಮ್ಮಯ್ಯ, ಅನಿಲ್ ಕುಮಾರ್, ಎ.ಆರ್.ಕೃಷ್ಣಮೂರ್ತಿ, ಮಧು ಜಿ ಮಾದೇಗೌಡ, ಕೆ.ಹರೀಶ್ ಗೌಡ, ದರ್ಶನ್ ಧ್ರುವನಾರಾಯಣ, ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಮಾನಸ, ಗ್ಯಾರಂಟಿ ಅನುಷ್ಠಾನ ಸಮಿತಿಯ ಉಪಾಧ್ಯಕ್ಷರಾದ ಪುಷ್ಪಾ ಅಮರನಾಥ್, ಅಯೂಬ್ ಖಾನ್ ಮತ್ತಿತರರು ಉಪಸ್ಥಿತರಿದ್ದರು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular