HomeLatest NewsBREAKING : ಕೋಟ್ಯಾಂತರ ರೂ.ಚಿನ್ನಾಭರಣ ವಂಚನೆ ಕೇಸ್ : ಆರೋಪಿ ಐಶ್ವರ್ಯಾಗೌಡ 14 ದಿನ 'ED'...

BREAKING : ಕೋಟ್ಯಾಂತರ ರೂ.ಚಿನ್ನಾಭರಣ ವಂಚನೆ ಕೇಸ್ : ಆರೋಪಿ ಐಶ್ವರ್ಯಾಗೌಡ 14 ದಿನ ‘ED’ ಕಸ್ಟಡಿಗೆ.!

ಬೆಂಗಳೂರು : ಮಾಜಿ ಸಂಸದ ಡಿ.ಕೆ.ಸುರೇಶ್ ಸಹೋದರಿ ಎಂದು ಹೇಳಿಕೊಂಡು ಕೋಟ್ಯಂತರ ರೂಪಾಯಿ ಚಿನ್ನ ವಂಚಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಆರೋಪಿ ಐಶ್ವರ್ಯಾ ಗೌಡ ಮನೆ ಮೇಲೆ ದಾಳಿ ನಡೆಸಿದ್ದು, ಈ ವೇಳೆ ಐಶ್ವರ್ಯಾ ಗೌಡ ಅವರನ್ನು ವಶಕ್ಕೆ ಪಡೆದಿದ್ದರು.

ನಂತರ ಅವರನ್ನು ಜಡ್ಜ್ ಮುಂದೆ ಹಾಜರುಪಡಿಸಲಾಗಿದ್ದು, ಅವರನ್ನು 14 ದಿನ ಇಡಿ ವಶಕ್ಕೆ ನೀಡಿ ಆದೇಶ ಹೊರಡಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಐಶ್ವರ್ಯ ಗೌಡ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಕಿರುಗಾವಲು ಗ್ರಾಮದಲ್ಲಿ ಐಶ್ವರ್ಯಾ ಗೌಡ ನಿವಾಸ ಮತ್ತು ಗೊರಗುಂಟೆಪಾಳ್ಯದಲ್ಲಿರುವ ಫ್ಲ್ಯಾಟ್ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದರು. ಈ ವೇಳೆ ಮಹತ್ವದ ದಾಖಲೆಗಳನ್ನು ಜಪ್ತಿ ಮಾಡಿದ್ದಾರೆ.

ಇದೇ ವೇಳೆ ಇಡಿ ಅಧಿಕಾರಿಗಳು ಬೆಂಗಳೂರಿನ ಆರ್.ಆರ್.ನಗರದ ಕಾಂಗ್ರೆಸ್ ಮುಖಂಡ ತಿಬ್ಬೇಗೌಡ ನಿವಾಸದ ಮೇಲೆ ಹಾಗೂ ಮಾಜಿ ಸಚಿವ ವಿನಯ್ ಕುಲಕರಣಿ ಅವರ ಡಾಲರ್ಸ್ ಕಾಲೋನಿ ನಿವಾಸದ ಮೇಲೂ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular