HomeLatest Newsರಾಜ್ಯದಲ್ಲಿನ್ನು ಬಹುಮಹಡಿ ಕಟ್ಟಡಗಳಿಗೆ ಮತ್ತಷ್ಟು ತೆರಿಗೆ: ಶೇ. 1 ರಷ್ಟು 'ಅಗ್ನಿ ಸೆಸ್’ ಹೊರೆ

ರಾಜ್ಯದಲ್ಲಿನ್ನು ಬಹುಮಹಡಿ ಕಟ್ಟಡಗಳಿಗೆ ಮತ್ತಷ್ಟು ತೆರಿಗೆ: ಶೇ. 1 ರಷ್ಟು ‘ಅಗ್ನಿ ಸೆಸ್’ ಹೊರೆ

ಬೆಂಗಳೂರು: ರಾಜ್ಯದ ಬಹುಮಹಡಿ ಕಟ್ಟಡಗಳಿಗೆ ಶೇಕಡ 1ರಷ್ಟು ಅಗ್ನಿ ಸೆಸ್ ವಿಧಿಸಲು ಅವಕಾಶ ಕಲ್ಪಿಸುವ ಕರ್ನಾಟಕ ಅಗ್ನಿಶಾಮಕ ದಳ ತಿದ್ದುಪಡಿ ಮಸೂದೆ 2025 ಕ್ಕೆ ವಿಧಾನ ಮಂಡಲದ ಉಭಯ ಸದನಗಳಲ್ಲಿ ಅನುಮೋದನೆ ದೊರೆತಿದೆ.

21 ಮೀಟರ್ ಗಿಂತಲೂ ಹೆಚ್ಚು ಎತ್ತರದ ಬಹುಮಹಡಿ ಕಟ್ಟಡಗಳಿಗೆ ಅವುಗಳ ತೆರಿಗೆಯ ಮೇಲೆ ಶೇಕಡ 1ರಷ್ಟು ಅಗ್ನಿ ಸೆಸ್ ವಿಧಿಸಲು ಈ ಮಸೂದೆಯಲ್ಲಿ ಅವಕಾಶ ಕಲ್ಪಿಸಲಾಗಿದೆ. ರಾಜ್ಯಪಾಲರ ಅಂಕಿತ ದೊರೆತ ನಂತರ ಕಾಯ್ದೆಯಾಗಿ ಜಾರಿಯಾಗಲಿದೆ. ಬಳಿಕ ಬಹುಮಹಡಿ ಕಟ್ಟಡಗಳ ಮಾಲೀಕರಿಗೆ ತೆರಿಗೆ ಹೊರೆ ಹೆಚ್ಚಾಗಲಿದೆ.

ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರು ವಿಧಾನ ಪರಿಷತ್ ನಲ್ಲಿ ಮಸೂದೆ ಮಂಡಿಸಿದಾಗ ಅಗ್ನಿ ಸೆಸ್ ವಿಧಿಸಲು ವಿಪಕ್ಷಗಳ ಸದಸ್ಯರು ಆಕ್ಷೇಪಿಸಿದ್ದಾರೆ. ಎಲ್ಲದಕ್ಕೂ ಈ ಸರ್ಕಾರ ತೆರಿಗೆ ವಿಧಿಸುತ್ತಿದೆ. ಗಾಳಿಗೆ ತೆರಿಗೆ ವಿಧಿಸುವುದೊಂದೇ ಬಾಕಿ ಇದೆ ಎಂದು ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular