HomeEntertainment32ನೇ ವಸಂತಕ್ಕೆ ಕಾಲಿಟ್ಟ ಬಹುಭಾಷಾ ನಟಿ ಹನ್ಸಿಕಾ ಮೋಟ್ವಾನಿ

32ನೇ ವಸಂತಕ್ಕೆ ಕಾಲಿಟ್ಟ ಬಹುಭಾಷಾ ನಟಿ ಹನ್ಸಿಕಾ ಮೋಟ್ವಾನಿ

ಜನುಮದಿನದ ಶುಭಾಶಯ Hansika Motwani Vistara News

ಬಹುಭಾಷಾ ನಟಿ ಹನ್ಸಿಕಾ ಮೋಟ್ವಾನಿ ಇಂದು ತಮ್ಮ 32ನೇ ಹುಟ್ಟುಹಬ್ಬವನ್ನು ತಮ್ಮ ಸ್ನೇಹಿತರು ಹಾಗೂ ಕುಟುಂಬದೊಂದಿಗೆ ಆಚರಿಸಿಕೊಳ್ಳುತ್ತಿದ್ದಾರೆ. 2003 ರಲ್ಲಿ ತೆರೆಕಂಡ ‘ಹವಾ’ ಹಾಗೂ ‘ಕೊಯಿ ಮಿಲ್ ಗಯಾ’ ಸಿನಿಮಾಗಳಲ್ಲಿ ಬಾಲ ಕಲಾವಿದೆಯಾಗಿ ಅಭಿನಯಿಸುವ ಮೂಲಕ ಸಿನಿಮಾರಂಗಕ್ಕೆ ಅವರು ಪಾದಾರ್ಪಣೆ ಮಾಡಿದ್ದರು.

ಬಾಲ ನಟಿಯಾಗಿ ಸಾಕಷ್ಟು ಹೆಸರು ಮಾಡಿದ್ದ ಹನ್ಸಿಕಾ 2007 ರಲ್ಲಿ ಸ್ಟೈಲಿಸ್ಟ್ ಸ್ಟಾರ್ ಅಲ್ಲು ಅರ್ಜುನ್ ಜೊತೆ ‘ದೇಶಮುದುರು’ಸಿನಿಮಾದಲ್ಲಿ ಮೊದಲ ಬಾರಿ ನಾಯಕಿಯಾಗಿ ಅಭಿನಯಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

2008ರಲ್ಲಿ ಬಿಡುಗಡೆಯಾಗಿದ್ದ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ನಟನೆಯ ʼಬಿಂದಾಸ್ʼ ಸಿನಿಮಾದಲ್ಲಿ ಅಭಿನಯಿಸುವ ಮೂಲಕ ಸ್ಯಾಂಡಲ್ ವುಡ್ ಗೂ ಪ್ರವೇಶಿಸಿದರು. ನಂತರ ತೆಲುಗು ಹಾಗು ತಮಿಳು ಚಿತ್ರರಂಗದ ಬೇಡಿಕೆ ನಟಿಯಾಗಿ ಹೊರಹೊಮ್ಮಿದರು.

ಇತ್ತೀಚಿಗೆ ನಟಿ ಹನ್ಸಿಕಾ ‘ರೌಡಿ ಬೇಬಿ’, ‘ಗಾರ್ಡಿಯನ್’ ಸೇರಿದಂತೆ ಮ್ಯಾನ್ ಚಿತ್ರದ ಶೂಟಿಂಗ್ ನಲ್ಲಿದ್ದಾರೆ. ಇಂದು ಸೋಶಿಯಲ್ ಮೀಡಿಯಾದಲ್ಲಿ ಹಲವಾರು ಸಿನಿ ತಾರೆಯರು ಹನ್ಸಿಕಾ ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular