BREAKING: ಪಾಕಿಸ್ತಾನದ ಗ್ವಾದರ್ ಬಂದರಿನಲ್ಲಿ ಸರಣಿ ಸ್ಫೋಟ, ಶಸ್ತ್ರಸಜ್ಜಿತರಿಂದ ದಾಳಿ

ಪಾಕಿಸ್ತಾನದ ಆಯಕಟ್ಟಿನ ಗ್ವಾದರ್ ಬಂದರಿನಲ್ಲಿ ಹಲವಾರು ಶಸ್ತ್ರಸಜ್ಜಿತ ದಾಳಿಕೋರರು ಸಂಕೀರ್ಣಕ್ಕೆ ಪ್ರವೇಶಿಸಿದ ನಂತರ ಅನೇಕ ಸ್ಫೋಟಗಳು ಸಂಭವಿಸಿವೆ.

ಬಂದರಿನಲ್ಲಿ ದಾಳಿಕೋರರು ಮತ್ತು ಭದ್ರತಾ ಸಿಬ್ಬಂದಿ ನಡುವೆ ಭಾರೀ ಗುಂಡಿನ ಚಕಮಕಿ ನಡೆದಿದೆ. ನಿಷೇಧಿತ ಬಲೂಚಿಸ್ತಾನ್ ಲಿಬರೇಶನ್ ಆರ್ಮಿ(ಬಿಎಲ್‌ಎ)ಯ ಮಜೀದ್ ಬ್ರಿಗೇಡ್ ಪ್ರಕ್ಷುಬ್ಧ ಬಲೂಚಿಸ್ತಾನ್ ಪ್ರದೇಶದಲ್ಲಿ ನಡೆದ ದಾಳಿಯ ಹೊಣೆಯನ್ನು ಹೊತ್ತುಕೊಂಡಿದೆ. ಗ್ವಾದರ್ ಬಂದರು ಮಹತ್ವಾಕಾಂಕ್ಷೆಯ ಚೀನಾ-ಪಾಕಿಸ್ತಾನ ಆರ್ಥಿಕ ಕಾರಿಡಾರ್(CPEC) ಯೋಜನೆಯ ಪ್ರಮುಖ ಭಾಗವಾಗಿದೆ.

2022 ರಲ್ಲಿ ಇಸ್ಲಾಮಾಬಾದ್‌ನೊಂದಿಗಿನ ಕದನ ವಿರಾಮ ಒಪ್ಪಂದವನ್ನು ತೆಹ್ರೀಕ್-ಎ-ತಾಲಿಬಾನ್ ಪಾಕಿಸ್ತಾನ ಕೊನೆಗೊಳಿಸಿದ ನಂತರ ಪಾಕಿಸ್ತಾನವು ಖೈಬರ್ ಪಖ್ತುಂಕ್ವಾ ಮತ್ತು ಬಲೂಚಿಸ್ತಾನ್ ಪ್ರದೇಶದಲ್ಲಿ ಭಯೋತ್ಪಾದಕ ಚಟುವಟಿಕೆಗಳಲ್ಲಿ ಭಾರಿ ಹೆಚ್ಚಳ ಆಗಿದೆ.

ಪಾಕಿಸ್ತಾನದ ಗ್ವಾದರ್ ಬಂದರಿನಲ್ಲಿ ಸರಣಿ ಬಾಂಬ್ ಸ್ಪೋಟ ಸಂಭವಿಸಿದೆ. ಪಾಕಿಸ್ತಾನದ ಐಎಸ್ಐ, ನಾಯಕರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗಿದೆ. ಬಲೂಚಿಸ್ತಾನ ಲಿಬರೇಷನ್ ಆರ್ಮಿ ದಾಳಿಯ ಹೊಣೆ ಹೊತ್ತುಕೊಂಡಿದೆ ಎಂದು ಹೇಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read