ಚಲಿಸುತ್ತಿದ್ದ ರೈಲಿನಿಂದ ಬಿದ್ದ ವ್ಯಕ್ತಿ; ಸಮಯಪ್ರಜ್ಞೆ ಮೆರೆದು ರಕ್ಷಿಸಿದ RPF ಸಿಬ್ಬಂದಿ | Watch Video

ಮುಂಬೈ: ಮುಂಬೈನ ಅಂಧೇರಿ ರೈಲ್ವೆ ನಿಲ್ದಾಣದಲ್ಲಿ ಚಲಿಸುತ್ತಿದ್ದ ರೈಲಿನಿಂದ ಬಿದ್ದು ವ್ಯಕ್ತಿಯೊಬ್ಬರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಘಟನೆಯಲ್ಲಿ ಆರ್‌ಪಿಎಫ್ ಸಿಬ್ಬಂದಿಯ ಸಮಯೋಚಿತ ಮಧ್ಯಪ್ರವೇಶದಿಂದ ಸಂಭವನೀಯ ದುರಂತ ತಪ್ಪಿದೆ.

ಭಾನುವಾರ ಲೋಕಶಕ್ತಿ ಎಕ್ಸ್‌ಪ್ರೆಸ್ ರೈಲು ಅಂಧೇರಿ ನಿಲ್ದಾಣದ ಎಂಟನೇ ಪ್ಲಾಟ್‌ಫಾರ್ಮ್‌ನಿಂದ ಹೊರಡುತ್ತಿದ್ದಾಗ ಈ ಘಟನೆ ಸಂಭವಿಸಿದೆ. ರಾಜೇಂದ್ರ ಮಂಗಿಲಾಲ್ (40) ಎಂಬ ವ್ಯಕ್ತಿ ಅಹಮದಾಬಾದ್‌ಗೆ ತೆರಳಲು ರೈಲು ಹತ್ತಲು ಪ್ರಯತ್ನಿಸುತ್ತಿದ್ದರು. ಆದರೆ ಅವರು ಆಯತಪ್ಪಿ ಪ್ಲಾಟ್‌ಫಾರ್ಮ್‌ ಮೇಲೆ ಬಿದ್ದಿದ್ದಾರೆ. ಅವರ ಕಾಲು ರೈಲು ಮತ್ತು ಪ್ಲಾಟ್‌ಫಾರ್ಮ್ ನಡುವೆ ಸಿಲುಕಿಕೊಂಡಿತ್ತು.

ಈ ಸಂದರ್ಭದಲ್ಲಿ ಕರ್ತವ್ಯದಲ್ಲಿದ್ದ ಆರ್‌ಪಿಎಫ್ ಸಹಾಯಕ ಉಪ-ನಿರೀಕ್ಷಕ ಪಹುಪ್ ಸಿಂಗ್ ಅವರು ತಕ್ಷಣ ಕಾರ್ಯಪ್ರವೃತ್ತರಾಗಿ ಮಂಗಿಲಾಲ್ ಅವರನ್ನು ಸುರಕ್ಷಿತವಾಗಿ ಹೊರತೆಗೆದರು. ಈ ಮೂಲಕ ಅವರ ಜೀವ ಉಳಿಸಿದ್ದಾರೆ. ಈ ಸಾಹಸದ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಮಂಗಿಲಾಲ್ ಅವರು ತಡವಾಗಿ ಬಂದ ಕಾರಣ ಚಲಿಸುತ್ತಿದ್ದ ರೈಲನ್ನು ಹತ್ತಲು ಪ್ರಯತ್ನಿಸಿದೆ ಎಂದು ಒಪ್ಪಿಕೊಂಡಿದ್ದಾರೆ. ಆರ್‌ಪಿಎಫ್ ಸಿಬ್ಬಂದಿಯ ಸಮಯೋಚಿತ ಸಹಾಯದಿಂದ ಅವರು ದೊಡ್ಡ ಅಪಾಯದಿಂದ ಪಾರಾಗಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read