HomeLatest NewsBIG NEWS: ಮುಂಬೈ ದಾಳಿ ಪ್ರಕರಣ: ತಹವೂರ್ ರಾಣಾ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

BIG NEWS: ಮುಂಬೈ ದಾಳಿ ಪ್ರಕರಣ: ತಹವೂರ್ ರಾಣಾ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ನವದೆಹಲಿ: ಮುಂಬೈ ದಾಳಿ ಪ್ರಕರಣದ ಆರೋಪಿ ತಹವೂರ್ ರಾಣಾ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ ದೆಹಲಿ ನ್ಯಾಯಾಲಯ ಆದೇಶ ಹೊರಡಿಸಿದೆ.

ದೆಹಲಿ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಚಂದನ್ ಜಿತ್ ಸಿಂಗ್, ತಹವೂರ್ ರಾಣಾ ನ್ಯಾಯಾಂಗ ಬಂಧನ ಅವಧಿಯನ್ನು ಜುಲೈ 9ರವರೆಗೆ ವಿಸ್ತರಿಸಿ ಆದೇಶ ಹೊರಡಿಸಿದ್ದಾರೆ.

ತಹವೂರ್ ರಾಣಾನನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ತಿಹಾರ್ ಜೈಲಿನಿಂದ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ರಾಣಾ ಆರೋಗ್ಯದ ಬಗ್ಗೆ ಆತನ ಪರ ವಕೀಲರು ಕಳವಳ ವ್ಯಕ್ತಪಡಿಸಿದ್ದ ಹಿನ್ನೆಲೆಯಲ್ಲಿ ಆತನ ಆರೋಗ್ಯ ಸ್ಥಿತಿ ಬಗ್ಗೆ ನ್ಯಾಯಾಧಿಶರು ವಿಚಾರಿಸಿದರು. ಬಳಿಕ ಜುಲೈ 9ರವರೆಗೆ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ ಆದೇಶ ಹೊರಡಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular