HomeIndiaಕೇಂದ್ರ ಸಚಿವ ಮುರಳೀಧರ ಮೋಹೋಲ್ ಬೆಂಗಾವಲು ವಾಹನ ಓವರ್ ಟೇಕ್ ಮಾಡಿದ ಆರೋಪ: ಬೈಕ್ ಸವಾರನ...

ಕೇಂದ್ರ ಸಚಿವ ಮುರಳೀಧರ ಮೋಹೋಲ್ ಬೆಂಗಾವಲು ವಾಹನ ಓವರ್ ಟೇಕ್ ಮಾಡಿದ ಆರೋಪ: ಬೈಕ್ ಸವಾರನ ವಿರುದ್ಧ FIR ದಾಖಲು

ಮುಂಬೈ: ಕೇಂದ್ರ ಸಚಿವರೊಬ್ಬರ ಬೆಂಗಾವಲು ವಾಹನವನ್ನು ಓವರ್ ಟೇಕ್ ಮಾಡಿದ್ದಕ್ಕೆ ಬೈಕ್ ಸವಾರನೊಬ್ಬನಿಗೆ ಸಂಕಷ್ಟ ಎದುರಾಗಿದೆ. ಬೈಕ್ ಸವಾರನ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಕೇಂದ್ರ ಸಚಿವ ಮುರಳೀಧರ್ ಮೋಹೋಲ್ ಅವರ ಬೆಂಗಾವಲು ವಾಹನಗಳನ್ನು ಅಡ್ಡಾದಿಡ್ಡಿಯಾಗಿ ಬೈಕ್ ಓಡಿಸಿ ಓವರ್ ಟೇಕ್ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಬೈಕ್ ಸವಾರನ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶನಿವಾರ ರಾತ್ರಿ ಸುಮಾರು 8:30ರ ವೇಳೆಗೆ ಪುಣೆ ನಗರದ ಶಿವಾಜಿನಗರ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಆರೋಪಿಯು ಮದ್ಯದ ಅಮಲಿನಲ್ಲಿ ಅತಿವೇಗ ಹಾಗೂ ನಿರ್ಲಕ್ಷ್ಯದಿಂದ ಬೈಕ್ ಚಲಾಯಿಸುತ್ತಾ ಬೆಂಗಾವಲು ವಾಹನಗಳನ್ನು ಓವರ್ ಟೇಕ್ ಮಾಡಿರುವುದಾಗಿ ದೂರುನಲ್ಲಿ ಆರೋಪಿಸಲಾಗಿದೆ.

ಪುಣೆ ವಿಮಾನ ನಿಲ್ದಾಣದಿಂದ ಕೊತ್ರುಡ್ ಕಡೆಗೆ ನಾಗರಿಕ ವಿಮಾನಯಾನ ರಾಜ್ಯ ಖಾತೆ ಸಚಿವ ಮುರಳೀಧರ್ ಮೋಹೋಲ್ ಅವರ ಬೆಂಗಾವಲು ವಾಹನಗಳು ಸಾಗುತ್ತಿದ್ದವು. ಬೆಂಗಾವಲು ವಾಹನಗಳು ಶಿವಾಜಿನಗರದ ಸಂಚೇತಿ ಚೌಕ್ ತಲುಪುತ್ತಿದ್ದಂತೆ, 32 ವರ್ಷದ ಆರೋಪಿ ಬೈಕ್ ಸವಾರನು ವಾಹನಗಳ ಮಧ್ಯೆ ಅಡ್ಡಾದಿಡ್ಡಿಯಾಗಿ ನುಗ್ಗಿ ಓವರ್ ಟೇಕ್ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ಬಳಿಕ ಆರೋಪಿಯನ್ನು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಈ ವೇಳೆ ಆತ ಮದ್ಯದ ಅಮಲಿನಲ್ಲಿದ್ದ ಎಂಬುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯು ಇತರರಿಗೆ ಅಪಾಯ ಉಂಟುಮಾಡುವ ಹಾಗೂ ವಾಹನ ಸಂಚಾರಕ್ಕೆ ಅಡ್ಡಿಯುಂಟುಮಾಡುವ ರೀತಿಯಲ್ಲಿ ಬೈಕ್ ಚಲಾಯಿಸುತ್ತಿದ್ದ ಎಂದು ಎಫ್ಐಆರ್ ನಲ್ಲಿ ಉಲ್ಲೇಖಿಸಲಾಗಿದೆ.

ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 184, 185, 119 ಮತ್ತು 177ರ ಅಡಿಯಲ್ಲಿ ಶಿವಾಜಿನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ. ಆರೋಪಿಗೆ ನೋಟಿಸ್ ಜಾರಿ ಮಾಡಿದ ಬಳಿಕ ಆತನನ್ನು ಬಿಟ್ಟು ಕಳುಹಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ನಾನೀಗ ಮುಖ್ಯಮಂತ್ರಿ ಅಲ್ಲ, ನನ್ನ ಮಾತು ಎಷ್ಟು ನಡೆಯುತ್ತೆ? ಎಷ್ಟು ನಡೆಯಲ್ಲ ಅನ್ನೋದು ನನಗೆ ಮಾತ್ರ ಗೊತ್ತು ಎಂದ ಸಿದ್ದರಾಮಯ್ಯ

ಬೆಂಗಳೂರು: ನನ್ನ ಮಾತು ಈಗಲೂ ನಡೆಯುತ್ತದೆ ಎಂದು ಬಹಳಷ್ಟು ಜನ ಅಂದುಕೊಂಡಿದ್ದಾರೆ. ಆದರೆ ನಾನೀಗ ಮುಖ್ಯಮಂತ್ರಿ ಅಲ್ಲ, ನನ್ನ ಮಾತು ಎಷ್ಟು ನಡೆಯುತ್ತೆ? ಎಷ್ಟು ನಡೆಯಲ್ಲ ಅನ್ನೋದು ನನಗೆ ಮಾತ್ರ ಗೊತ್ತು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ವಿಧಾನಸೌಧದ ಸಿಎಲ್‌ಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ನಾನೀಗ ಮುಖ್ಯಮಂತ್ರಿ ಅಲ್ಲ. ನನ್ನ ಮಾತು ಈಗಲೂ ನಡೆಯುತ್ತೆ ಅಂತ ಬಹಳ ಜನ ಅನ್ಕೊಂಡಿದ್ದಾರೆ. ನಾನೂ ಹಾಗೇ ಅನ್ಕೊಂಡಿದ್ದೇನೆ. ಆದ್ರೆ ನನ್ನ ಮಾತು ಎಷ್ಟು ನಡೆಯುತ್ತೆ, ಎಷ್ಟು ನಡೆಯಲ್ಲ ಅಂತ ನನಗೆ ಮಾತ್ರ ಗೊತ್ತು ಎಂದರು.

ಸಿದ್ದರಾಮಯ್ಯ ಅವರ ಈ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಎರಡು ದಿನಗಳ ಹಿಂದೆ ದೆಹಲಿಗೆ ಹೋಗಿ ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ಚರ್ಚಿಸಿದ್ದರು. ಬಳಿಕ ನಿನ್ನೆಯಷ್ಟೇ ಬೆಂಗಳೂರಿನಲ್ಲಿ ಎಐಸಿಸಿ ನಾಯಕರ ಜೊತೆ ಸಿದ್ದರಾಮಯ್ಯ ಪ್ರತ್ಯೇಕ ಮಾತುಕತೆ ನಡೆಸಿದ್ದರು. ಈ ಎಲ್ಲಾ ಬೆಳವಣಿಗೆ ಬೆನ್ನಲ್ಲೇ ಈಗ ಸಿದ್ದರಾಮಯ್ಯ ಈ ಹೇಳಿಕೆ ನೀಡಿರುವುದು ಕುತೂಹಲ ಮೂಡಿಸಿದೆ.

ಸದ್ಯದ ಸರ್ಕಾರದಲ್ಲಿ ತಮ್ಮ ಮಾತು ಎಷ್ಟು ನಡೆಯುತ್ತೆ? ಎಷ್ಟು ನಡೆಯಲ್ಲ? ಅಂತ ನನಗೆ ಮಾತ್ರ ಗೊತ್ತಿದೆ ಎಂದು ಹೇಳುವ ಮೂಲಕ ತಮ್ಮ ಸಲಹೆಗಳಿಗೆ ಸರ್ಕಾರದಲ್ಲಿ ಮನ್ನಣೆ ಸಿಗುತ್ತಿಲ್ಲ ಎಂದು ಪರೋಕ್ಷವಾಗಿ ಬೇಸರ ಹೊರಹಾಕಿದ್ದಾರೆ ಎನ್ನಲಾಗುತ್ತಿದೆ.

ಇದೇ ವೇಳೆ ಬಿಜೆಪಿ ಹಾಗೂ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಸಿದ್ದರಾಮಯ್ಯ, ಪ್ರಜಾಪ್ರಭುತ್ವದ ವಿರೋಧಿಗಳಿಂದ ಸಂವಿಧಾನ ಶ್ರೇಷ್ಠವಾಗಲ್ಲ. ಸ್ವಾತಂತ್ರ‍್ಯ ಬಂದು 80 ವರ್ಷ ಆದರೂ ಸಂವಿಧಾನದ ಆಶಯ ಈಡೇರಿಲ್ಲ. ಪ್ರಜಾಪ್ರಭುತ್ವ ಧ್ವಂಸ ಮಾಡೋರ ಜೊತೆಗೆ ಹೋಗಬಾರದು, ಮನುವಾದಿಗಳಿಂದ ಬದಲಾವಣೆ ಆಗೋದಿಲ್ಲ. ಮನುವಾದಿಗಳ ಜೊತೆ ನೀವು ಹೋದರೆ ನಿಮಗೆ ಒಂದು ಸ್ಥಾನಮಾನ ಸಿಗಬಹುದು, ಆದ್ರೆ ಸಮಾಜದಲ್ಲಿ ಬದಲಾವಣೆಯಾಗುವುದಿಲ್ಲ. ಸಮಾಜದಲ್ಲಿ ಜಾತಿ ವ್ಯವಸ್ಥೆ ಜೀವಂತ ಇದೆ. ನಾವು ಶೂದ್ರ ವರ್ಗದ ಜನ, ಬದಲಾವಣೆಯ ದಾರಿಯಲ್ಲಿ ನಡೆಯಬೇಕು ಎಂದು ತಿಳಿಸುದರು.

ನರೇಂದ್ರ ಮೋದಿ ಪ್ರಧಾನಿಯಾಗಬೇಕಾದರೂದ್ರು ಸಂವಿಧಾನವೇ ಕಾರಣ. ಆದರೆ ಜಾತಿ ವ್ಯವಸ್ಥೆ ಬದಲಾವಣೆ ಆಗಬಾರದು ಅಂತ ಕೆಲವರು ಇದ್ದಾರೆ. ನಾನು 8 ವರ್ಷ ಸಿಎಂ ಆಗಿದ್ದಾಗ ಬದಲಾವಣೆಗೆ ಪ್ರಯತ್ನ ಪಟ್ಟೆ. SCSP-TSP ಕಾಯ್ದೆಯನ್ನ ಕೇಂದ್ರ ಸರ್ಕಾರ ಯಾಕೆ ಮಾಡಿಲ್ಲ? ಬಿಜೆಪಿಗೆ ವೋಟು ಕೊಟ್ಟು ಜನ ಕಳಿಸಿದ್ದಾರಲ್ಲಾ, ಬಹಳ ಜನ ಹುಡುಗರು ಮೋದಿ ಮೋದಿ ಅಂತಿದ್ರು, ಈಗ ಸೈಲೆಂಟ್‌ ಆಗಿದ್ದಾರೆ ಎಂದು ತಿರುಗೇಟು ನೀಡಿದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular