HomeIndiaಜ್ಞಾನೇಶ್ ಕುಮಾರ್ ರಿಸೈನ್‌ ಮಾಡದಿದ್ದರೆ ಮೋದಿ ವಿರುದ್ಧ ದೇಶವ್ಯಾಪಿ ಪ್ರತಿಭಟನೆ: ಅಭಿಜಿತ್ ದೀಪ್ಕೆ

ಜ್ಞಾನೇಶ್ ಕುಮಾರ್ ರಿಸೈನ್‌ ಮಾಡದಿದ್ದರೆ ಮೋದಿ ವಿರುದ್ಧ ದೇಶವ್ಯಾಪಿ ಪ್ರತಿಭಟನೆ: ಅಭಿಜಿತ್ ದೀಪ್ಕೆ

ಮುಂಬೈ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು. ಅವರು ರಾಜೀನಾಮೆ ನೀಡದಿದ್ದರೆ ಪ್ರಧಾನಿ ನರೇಂದ್ರ ಮೋದಿ ರಾಜೀನಾಮೆಗೆ ಆಗ್ರಹಿಸಿ ದೇಶಾದ್ಯಂತ ಹೋರಾಟ ನಡೆಸುವುದಾಗಿ ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಹೇಳಿದ್ದಾರೆ.

ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಮತದಾರರ ಪಟ್ಟಿಯಿಂದ ಸುಮಾರು 13 ಕೋಟಿ ಹೆಸರುಗಳನ್ನು ತೆಗೆದುಹಾಕಲಾಗಿದೆ ಎಂದು ಆರೋಪಿಸಿದರು. ಜ್ಞಾನೇಶ್ ಕುಮಾರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅನುಕೂಲವಾಗುವ ರೀತಿಯಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ದೀಪ್ಕೆ ದೂರಿದರು.‘ಒಂದು ದೇಶ, ಒಂದು ಚುನಾವಣೆ’ ಎಂಬ ಕೇಂದ್ರ ಸರ್ಕಾರದ ಘೋಷಣೆಯ ಹಿಂದೆ ಬಿಜೆಪಿ ‘ಒಂದು ದೇಶ, ಒಂದು ಪಕ್ಷ’ದ ಆಡಳಿತ ತರಲು ಮುಂದಾಗಿದೆ ಎಂದು ಅವರು ಆರೋಪಿಸಿದರು.

https://x.com/abhijeet_dipke/status/2105966451786203577

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಿದ್ದೆವು. ಇದೀಗ ಎರಡು ತಿಂಗಳಲ್ಲೇ ಮತ್ತೊಂದು ದೊಡ್ಡ ಹೋರಾಟ ನಡೆಸಬೇಕಾದ ಪರಿಸ್ಥಿತಿ ಬಂದಿದೆ ಎಂದು ದೀಪ್ಕೆ ಹೇಳಿದರು. ಕೇಂದ್ರ ಸರ್ಕಾರದ ವಿರುದ್ಧವೂ ಅವರು ಟೀಕೆ ವ್ಯಕ್ತಪಡಿಸಿದರು.ಈ ಪ್ರತಿಭಟನೆಗೆ ಮುಂಬೈ ಪೊಲೀಸರು ಅನುಮತಿ ನೀಡಿರಲಿಲ್ಲ. ಆದರೂ ಸಿಜೆಪಿ ಕಾರ್ಯಕರ್ತರು ಶಿವಾಜಿ ಪಾರ್ಕ್‌ನಲ್ಲಿ ಸೇರಿ ಪ್ರತಿಭಟನೆ ನಡೆಸಿದರು. ಸ್ಥಳೀಯರಿಂದಲೂ ಪ್ರತಿಭಟನೆಗೆ ವಿರೋಧ ವ್ಯಕ್ತವಾಯಿತು.ಅನುಮತಿ ಇಲ್ಲದೆ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಸಿಜೆಪಿ ನಾಯಕರ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ವರದಿಯಾಗಿದೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular