HomeKarnatakaಖರೀದಿ ನೆಪದಲ್ಲಿ 1.64 ಕೋಟಿ ರೂ. ಮೌಲ್ಯದ ಚಿನ್ನಾಭರಣ ದೋಚಿದ್ದ ಮುಂಬೈ ಗ್ಯಾಂಗ್ ಅರೆಸ್ಟ್

ಖರೀದಿ ನೆಪದಲ್ಲಿ 1.64 ಕೋಟಿ ರೂ. ಮೌಲ್ಯದ ಚಿನ್ನಾಭರಣ ದೋಚಿದ್ದ ಮುಂಬೈ ಗ್ಯಾಂಗ್ ಅರೆಸ್ಟ್

ಬೆಂಗಳೂರು: ಚಿನ್ನಭರಣ ಖರೀದಿಸುವ ನೆಪದಲ್ಲಿ ಜುವೆಲ್ಲರಿ ಶಾಪ್ ಸಿಬ್ಬಂದಿಯಿಂದ 1.64 ಕೋಟಿ ರೂಪಾಯಿ ಮೌಲ್ಯದ ಚೆನ್ನಾಭರಣ ದೋಚಿದ್ದ ಮುಂಬೈ ಮೂಲದ ಇಬ್ಬರು ಆರೋಪಿಗಳನ್ನು ಮಲ್ಲೇಶ್ವರಂ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಮುಂಬೈನ ಪರೇಶ್ ಸೋನಿ ಮತ್ತು ಪ್ರವೀಣ್ ಅಲಿಯಾಸ್ ಪಪ್ಪು ಬಂಧಿತ ಆರೋಪಿಗಳು. ಶ್ಯಾಮ್ ಹಾಗೂ ಮತ್ತೊಬ್ಬ ಆರೋಪಿ ತಲೆಮರೆಸಿಕೊಂಡಿದ್ದು ಅವರ ಬಂಧನಕ್ಕೆ ಬಲೆ ಬೀಸಲಾಗಿದೆ. ಆರೋಪಿಗಳು ಮೇ 16ರಂದು ಮಲ್ಲೇಶ್ವರದ ಸಂಪಿಗೆ ರಸ್ತೆಯಲ್ಲಿ ತಾತ್ಕಾಲಿಕವಾಗಿ ಸ್ಥಾಪಿಸಿದ್ದ ಕಚೇರಿಯೊಂದರಲ್ಲಿ ಈ ಕೃತ್ಯ ನಡೆದಿದ್ದು, ಬಂಧಿತರಿಂದ 1.64 ಕೋಟಿ ರೂ. ಮೌಲ್ಯದ 1.08 ಕೆಜಿ ಚಿನ್ನದ ಗಟ್ಟಿ ಜಪ್ತಿ ಮಾಡಲಾಗಿದೆ.

ಚಿಕ್ಕಪೇಟೆಯ ಮಹೇಂದ್ರ ಕುಮಾರ್ ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಲಾಗಿದೆ. ಆಭರಣ ಖರೀದಿಸುವುದಾಗಿ ಮಹಾರಾಷ್ಟ್ರದಲ್ಲಿಯೂ ಆರೋಪಿಗಳು ಇದೇ ರೀತಿ ವಂಚಿಸಿದ್ದಾರೆ. ಮಹಾರಾಷ್ಟ್ರದ 15 ಪೊಲೀಸ್ ಠಾಣೆಗಳಲ್ಲಿ ಆರೋಪಿಗಳ ವಿರುದ್ಧ ಪ್ರಕರಣಗಳು ದಾಖಲಾಗಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಆರೋಪಿಗಳು ಕೃತ್ಯ ಎಸಗಿದ್ದಾರೆ. ಮಹಾರಾಷ್ಟ್ರ ಪೊಲೀಸರಿಗೆ ಈ ಬಗ್ಗೆ ಮಾಹಿತಿ ನೀಡಿದ್ದು ಅಲ್ಲಿನ ಪೊಲೀಸರು ಬಾಡಿ ವಾರೆಂಟ್ ಮೇಲೆ ಆರೋಪಿಗಳನ್ನು ವಶಕ್ಕೆ ಪಡೆದುಕೊಳ್ಳಲಿದ್ದಾರೆ.

ಮೇ 16 ರಂದು ತಮ್ಮ ಸಂಸ್ಥೆಗೆ ಭಾರಿ ಪ್ರಮಾಣದ ಆಭರಣಗಳು ಬೇಕಾಗಿವೆ ಎಂದು ಹೇಳಿದ ಆರೋಪಿಗಳು ಸಂಪಿಗೆ ರಸ್ತೆಯಲ್ಲಿರುವ ಕಚೇರಿಗೆ ಚಿನ್ನಾಭರಣಗಳ ಮಾದರಿ ತಂದು ತೋರಿಸುವಂತೆ ಕೋರಿದ್ದರು. ಆರೋಪಿಗಳು ಆಭರಣ ಮಾದರಿಗಳನ್ನು ನೋಡಿ ಅವುಗಳ ಫೋಟೋ ತೆಗೆಯುವ ನೆಪದಲ್ಲಿ ಪಕ್ಕದ ಕೊಠಡಿಗೆ ಆಭರಣಗಳನ್ನು ತೆಗೆದುಕೊಂಡು ಹೋಗಿದ್ದರು. ಕೆಲ ಸಮಯ ಕಳೆದರೂ ಆರೋಪಿಗಳು ರೂಮ್ ನಿಂದ ಹೊರಗೆ ಬಂದಿರಲಿಲ್ಲ. ಒಳಗೆ ಹೋಗಿ ಪರಿಶೀಲಿಸಿದಾಗ ಆಭರಣ ಸಹಿತ ನಾಪತ್ತೆಯಾಗಿರುವುದು ಗೊತ್ತಾಗಿತ್ತು. ಮುಂಬೈ ಜವಾರಿ ಬಜಾರ್ ಸೇರಿ ಹಲವು ಕಡೆ ಆಭಣಗಳನ್ನು ಆರೋಪಿಗಳು ಮಾರಾಟ ಮಾಡಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular