HomeLatest NewsBREAKING: ಸೆಲ್ಫಿಗೆ ನಿರಾಕರಣೆ; ಕ್ರಿಕೆಟಿಗ ಪೃಥ್ವಿ ಶಾ ಮೇಲೆ ಹಲ್ಲೆ

BREAKING: ಸೆಲ್ಫಿಗೆ ನಿರಾಕರಣೆ; ಕ್ರಿಕೆಟಿಗ ಪೃಥ್ವಿ ಶಾ ಮೇಲೆ ಹಲ್ಲೆ

ತಮ್ಮೊಂದಿಗೆ ಸೆಲ್ಫಿ ತೆಗೆಸಿಕೊಳ್ಳಲು ನಿರಾಕರಿಸಿದರು ಎಂಬ ಕಾರಣಕ್ಕೆ ಯುವ ಕ್ರಿಕೆಟಿಗ ಪೃಥ್ವಿ ಶಾ ಮೇಲೆ ಗುಂಪೊಂದು ಹಲ್ಲೆ ನಡೆಸಿದೆ ಎಂದು ಹೇಳಲಾಗಿದೆ.

ಮುಂಬೈನ ಓಶಿವಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೃಥ್ವಿ ಶಾ ತಮ್ಮ ಸ್ನೇಹಿತನೊಂದಿಗೆ ಬರುವಾಗ ಎದುರಾದ ಗುಂಪು ಸೆಲ್ಫಿ ಕೇಳಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಒಮ್ಮೆ ಫೋಟೋ ತೆಗೆದುಕೊಂಡರೂ ಸಹ ಮತ್ತಿಬ್ಬರು ಇನ್ನೊಂದು ಬಾರಿ ಫೋಟೋ ತೆಗೆಯಲು ಮುಂದಾಗಿದ್ದಾರೆ. ಇದಕ್ಕೆ ನಿರಾಕರಿಸಿದಾಗ ಪೃಥ್ವಿ ಶಾ ಮೇಲೆ ಎಂಟು ಜನರಿದ್ದ ಗುಂಪು ಹಲ್ಲೆ ಮಾಡಿದೆ ಎಂದು ತಿಳಿದು ಬಂದಿದೆ.

ಅಲ್ಲದೆ ಪೃಥ್ವಿ ಶಾ ಅವರ ಸ್ನೇಹಿತನ ಕಾರನ್ನು ಜಖಂಗೊಳಿಸಲಾಗಿದ್ದು, ಓಶಿವಾರ ಠಾಣೆ ಪೊಲೀಸರು ಎಂಟು ಮಂದಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular