HomeLive Newsಇಂದು ಮುಂಬೈ ಇಂಡಿಯನ್ಸ್ - ಚೆನ್ನೈ ಸೂಪರ್ ಕಿಂಗ್ಸ್ ಕಾಳಗದಲ್ಲಿ ಯಾರಿಗೆ ಒಲಿಯಲಿದೆ ವಿಜಯ ಮಾಲೆ...

ಇಂದು ಮುಂಬೈ ಇಂಡಿಯನ್ಸ್ – ಚೆನ್ನೈ ಸೂಪರ್ ಕಿಂಗ್ಸ್ ಕಾಳಗದಲ್ಲಿ ಯಾರಿಗೆ ಒಲಿಯಲಿದೆ ವಿಜಯ ಮಾಲೆ ?

ರಾಜಸ್ಥಾನ್ ರಾಯಲ್ಸ್ ತಂಡ ನಿನ್ನೆಯ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಎದುರು ಮೂರು ವಿಕೆಟ್ ಗಳಿಂದ ರೋಚಕ ಜಯ ಸಾಧಿಸಿದ್ದು, ಈ ಮೂಲಕ ಪಂಜಾಬ್ ಕಿಂಗ್ಸ್ ಗೆಲ್ಲುವ ಪಂದ್ಯವನ್ನು ಮತ್ತೊಮ್ಮೆ ಕೈ ಚೆಲ್ಲಿದೆ. ಇಂದು ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ಮುಖಾಮುಖಿಯಾಗಲಿದ್ದು, ಕ್ರಿಕೆಟ್ ಪ್ರೇಮಿಗಳು ಕಾತರದಿಂದ ಕಾಯುತ್ತಿದ್ದಾರೆ.

ಐಪಿಎಲ್ ಶುರುವಾದಾಗಿನಿಂದ ಇಂದಿನವರೆಗೂ ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಣ ಪಂದ್ಯಗಳು ಕೊನೆಯ ಹಂತದವರೆಗೂ ರೋಚಕತೆಯಿಂದಲೇ ಸಾಗಿವೆ. ಎರಡು ತಂಡಗಳು ಇದುವರೆಗೂ ಐದು ಬಾರಿ ಟ್ರೋಫಿ ಎತ್ತಿ ಹಿಡಿದಿದ್ದು, ಪ್ರತಿ ವರ್ಷವೂ ಬಲಿಷ್ಠ ತಂಡಗಳಾಗಿಯೇ ಕಾಣುತ್ತವೆ.

ಈ  ಪಂದ್ಯಕ್ಕೂ ಮುನ್ನ ಲಕ್ನೋ ಸೂಪರ್ ಜೈಂಟ್ಸ್ ಮತ್ತು ಕೊಲ್ಕತ್ತಾ ನೈಟ್ ರೈಡರ್ಸ್ ಮುಖಾಮುಖಿಯಾಗಲಿವೆ. ಭಾನುವಾರದ ಸೂಪರ್ ಡೂಪರ್ ಪಂದ್ಯಗಳ ಮನರಂಜನೆ ಪಡೆದುಕೊಳ್ಳಲು ಪ್ರೇಕ್ಷಕರು ಸಜ್ಜಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular