ಮುಂಬೈ: ಪಾಕಿಸ್ತಾನದ ಮೇಲೆ ಭಾರತೀಯ ಸೇನೆ ಆಪರೇಷನ್ ಸಿಂಧೂರ್ ಏರ್ ಸ್ಟ್ರೈಕ್ ಬೆನ್ನಲ್ಲೇ ಇಂದಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದೆ.
ಮುಂಬೈ ವಿಮಾನ ನಿದಾಣದಲ್ಲಿ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದೆ. ಇಂಡಿಗೋ ವಿಮಾನದಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಹಾಕಲಾಗಿದೆ.
ಭಾರತ ಪಾಕಿಸ್ತಾನದ 9 ಉಗ್ರರ ತಾಣಗಳ ಮೇಲೆ ಏರ್ ಸ್ಟ್ರೈಕ್ ಮಾಡಿ ಧ್ವಂಸಗೊಳಿಸಿರುವ ಬೆನ್ನಲ್ಲೇ ಇಂಡಿಗೋ ವಿಮಾನಕ್ಕೆ ಬೆದರಿಕೆ ಕರೆ ಬಂದಿದೆ ಎಂದು ತಿಳಿದುಬಂದಿದೆ. ಅಧಿಕಾರಿಗಳು ಬಾಂಬ್ ಪತ್ತೆದಳ, ಬಾಂಬ್ ನಿಷ್ಕ್ರಿಯ ದಳ ಸ್ಥಳಕ್ಕೆ ದೌಡಾಯಿಸಿ ತಪಾಸಣೆ ನಡೆಸಿದ್ದಾರೆ.