HomeIndiaBIG NEWS: ಲೋಖಂಡವಾಲ ಕಾಂಪ್ಲೆಕ್ಸ್ ಕಟ್ಟಡದಲ್ಲಿ ಬೆಂಕಿ ಅವಘಡ: ಮೂವರು ದುರ್ಮರಣ

BIG NEWS: ಲೋಖಂಡವಾಲ ಕಾಂಪ್ಲೆಕ್ಸ್ ಕಟ್ಟಡದಲ್ಲಿ ಬೆಂಕಿ ಅವಘಡ: ಮೂವರು ದುರ್ಮರಣ

ಮುಂಬೈ: ಮುಂಬೈನ ಲೋಖಂಡವಾಲ ಕಾಂಪ್ಲೆಕ್ಸ್ ಕಟ್ಟಡದಲ್ಲಿ ಭೀಕರ ಅಬೆಂಕಿ ಅವಘಡ ಸಂಭವಿಸಿದ್ದು, ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ.

ಲೋಕಂಡವಾಲ ಕಾಂಪ್ಲೆಕ್ಸ್ ನ 14ನೇ ಅಂತಸ್ತಿನ ವಸತಿ ಕತ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಅವಘಡದಲ್ಲಿ ಗಾಅಗೊಂದಿದ್ದ ಮೂವರನ್ನು ಕೂಪರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೂವರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಮೃತರನ್ನು ಚಂದ್ರಪ್ರಕಾಶ್ ಸೋನಿ (74), ಕಾಂತಾ ಸೋನಿ (74) ಹಾಗೂ ಪೆಲುಬೇಟ (42) ಎಂದು ಗುರುತಿಸಲಾಗಿದೆ. ಲೋಕಂಡವಾಲ ಕಾಂಪ್ಲೆಕ್ಸ್ ನ ರಿಯಾ ಪ್ಯಾಲೇಸ್ ಕಟ್ಟಡದ ಮಹಡಿಯಲ್ಲಿ ಇಂದು ಮುಂಜಾನೆ ಬೆಂಕಿ ಅವಘಡ ಸಂಭವಿಸಿದೆ. ಸದ್ಯ ಅಗ್ನಿಶಾಮಕ ಸಿಬ್ಬದಿಗಳು ಬೆಂಕಿ ನಂದಿಸಿದ್ದಾರೆ. ಬೆಂಕಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular