HomeIndiaBREAKING: ಮಹಿಳೆ ಮೇಲೆ ಮೂತ್ರ ವಿಸರ್ಜಿಸಿದ್ದ ಮುಂಬೈ ಮೂಲದ ವ್ಯಕ್ತಿ ಬೆಂಗಳೂರಿನಲ್ಲಿ ಅರೆಸ್ಟ್

BREAKING: ಮಹಿಳೆ ಮೇಲೆ ಮೂತ್ರ ವಿಸರ್ಜಿಸಿದ್ದ ಮುಂಬೈ ಮೂಲದ ವ್ಯಕ್ತಿ ಬೆಂಗಳೂರಿನಲ್ಲಿ ಅರೆಸ್ಟ್

ನವೆಂಬರ್ 26ರಂದು ನ್ಯೂಯಾರ್ಕ್ – ದೆಹಲಿ ಮಧ್ಯೆ ಸಂಚರಿಸುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ಹಿರಿಯ ಮಹಿಳೆಯೊಬ್ಬರ ಮೇಲೆ ಮೂತ್ರ ವಿಸರ್ಜನೆ ಮಾಡಿರುವ ಆರೋಪ ಹೊತ್ತಿದ್ದ ಮುಂಬೈ ಮೂಲದ ಶಂಕರ್ ಮಿಶ್ರಾನನ್ನು ಬೆಂಗಳೂರಿನಲ್ಲಿ ಇಂದು ಬಂಧಿಸಲಾಗಿದೆ.

ನವೆಂಬರ್ 26ರಂದು ಈ ಘಟನೆ ನಡೆದಿತ್ತಾದರೂ ತಡವಾಗಿ ಬೆಳಕಿಗೆ ಬಂದಿತ್ತು. ಇದರ ಬಳಿಕ ಶಂಕರ್ ಮಿಶ್ರಾ ಬಂಧನದ ಭೀತಿಯಿಂದ ತಲೆಮರೆಸಿಕೊಂಡಿದ್ದರು. ಅಲ್ಲದೆ ತಮ್ಮ ಮೊಬೈಲ್ ಫೋನ್ ಸ್ವಿಚ್ ಆಫ್ ಮಾಡಿಕೊಂಡಿದ್ದು, ಸೋಶಿಯಲ್ ಮೀಡಿಯಾದ ಮೂಲಕ ತಮ್ಮ ಸ್ನೇಹಿತರೊಂದಿಗೆ ಸಂಪರ್ಕದಲ್ಲಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆದರೆ ಅವರು ತಮ್ಮ ಕ್ರೆಡಿಟ್ ಕಾರ್ಡ್ ಬಳಸಿದ್ದು, ಇದರ ಮಾಹಿತಿ ಪಡೆದ ಪೊಲೀಸರು ಕೊನೆಗೂ ಶಂಕರ್ ಮಿಶ್ರಾನನ್ನು ಬಂಧಿಸಿದ್ದಾರೆ. ಆರೋಪಿಯನ್ನು ಮುಂಬೈಗೆ ಕರೆದೊಯ್ದು ಪೊಲೀಸರ ಮುಂದೆ ಹಾಜರುಪಡಿಸಲಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular