HomeIndiaSHOCKING: ತಡರಾತ್ರಿ ಹೈವೇಯಲ್ಲಿ ಕತ್ತು ಸೀಳಿದ ಮಾಂಜಾ ದಾರ: ಪೊಲೀಸ್ ಸಾವು

SHOCKING: ತಡರಾತ್ರಿ ಹೈವೇಯಲ್ಲಿ ಕತ್ತು ಸೀಳಿದ ಮಾಂಜಾ ದಾರ: ಪೊಲೀಸ್ ಸಾವು

ಮುಂಬೈ: ಭಾನುವಾರ ತಡರಾತ್ರಿ ಮುಂಬೈನಲ್ಲಿ ಮಾಂಜಾ(ಗಾಳಿಪಟದ) ದಾರ ಕುತ್ತಿಗೆಗೆ ಸುತ್ತಿಕೊಂಡು ಪೊಲೀಸ್ ಪೇದೆಯೊಬ್ಬರು ಪ್ರಾಣ ಕಳೆದುಕೊಂಡಿದ್ದಾರೆ.

ಕಾನ್‌ಸ್ಟೆಬಲ್ ಸಮೀರ್ ಜಾಧವ್ ಮೃತಪಟ್ಟವರು. ಕರ್ತವ್ಯ ಮುಗಿಸಿ ಮನೆಗೆ ಹೋಗುತ್ತಿದ್ದ ವೇಳೆ ಘಟನೆ ನಡೆದಿದೆ. ದಿಂಡೋಶಿ ಪೊಲೀಸ್ ಠಾಣೆಯಲ್ಲಿ ಕೆಲಸ ಮಾಡುತ್ತಿದ್ದ ಜಾಧವ್ ಅವರು ವರ್ಲಿಯಲ್ಲಿರುವ ತಮ್ಮ ಮನೆಗೆ ತೆರಳಿದ್ದರು. ಗಾಯಗೊಂಡಿದ್ದ ಕೂಡಲೇ ಅವರನ್ನು ಸಮೀಪದ ಸಿಯಾನ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪೊಲೀಸರ ಪ್ರಕಾರ, ಸಾಂತಾಕ್ರೂಜ್‌ನ ವಕೋಲಾ ಸೇತುವೆಯ ವೆಸ್ಟರ್ನ್ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ. ಖೇರವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular