HomeIndiaಮನೆ ಕುಸಿದು ಇಬ್ಬರು ದುರ್ಮರಣ

ಮನೆ ಕುಸಿದು ಇಬ್ಬರು ದುರ್ಮರಣ

ಮುಂಬೈ: ಭಾಂಡಪ್ ಪ್ರದೇಶದಲ್ಲಿ ಮನೆಯ ಒಂದು ಭಾಗ ಕುಸಿದು ಇಬ್ಬರು ಸಾವನ್ನಪ್ಪಿದ್ದಾರೆ.

ಭಾನುವಾರ ಮುಂಬೈನ ಭಾಂಡುಪ್ ಪ್ರದೇಶದಲ್ಲಿ ಮಹಡಿ ಮನೆಯ ಚಪ್ಪಡಿ ಕುಸಿದು ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಅಗ್ನಿಶಾಮಕ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಖಿಂಡಿಪಾಡಾ ಪ್ರದೇಶದಲ್ಲಿರುವ ಕಟ್ಟಡದಲ್ಲಿ ದುರಸ್ತಿ ಕಾರ್ಯ ನಡೆಯುತ್ತಿದ್ದಾಗ ಬೆಳಗ್ಗೆ 9:45ರ ಸುಮಾರಿಗೆ ಈ ಘಟನೆ ನಡೆದಿದೆ ಎಂದು ತಿಳಿಸಿದ್ದಾರೆ.

ಮೃತರನ್ನು ರಾಜ್‌ಕುಮಾರ್ ಧೋತ್ರೆ(19), ರಮಾನಂದ್ ಯಾದವ್(18) ಎಂದು ಗುರುತಿಸಲಾಗಿದ್ದು, ಅವರನ್ನು ಆಸ್ಪತ್ರೆಗೆ ಸಾಗಿಸಿದರೂ ಚಿಕಿತ್ಸೆ ಫಲಿಸದೇ ಅವರು ಸಾವನ್ನಪ್ಪಿದ್ದಾರೆ. ಅಗ್ನಿಶಾಮಕ ದಳದ ಅಧಿಕಾರಿಗಳು, ಪೊಲೀಸರು ಮತ್ತು ಸ್ಥಳೀಯ ನಾಗರಿಕರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯ ನಡೆಸಿದ್ದಾರೆ. ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.

 

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular