ಶಾಲೆಯಲ್ಲೇ ಆಘಾತಕಾರಿ ಘಟನೆ: 3 ತಿಂಗಳಿಂದ ಬಾಲಕಿ ಮೇಲೆ ಪ್ಯೂನ್ ಅತ್ಯಾಚಾರ

ಮುಂಬೈ: ಕಳೆದ ಮೂರು ತಿಂಗಳಿಂದ ಎಂಟು ವರ್ಷದ ಬಾಲಕಿಯ ಮೇಲೆ ಶಾಲೆಯ ಆವರಣದಲ್ಲಿ ಹಲವು ಬಾರಿ ಅತ್ಯಾಚಾರ ಎಸಗಿದ ಆರೋಪದ ಮೇಲೆ ಮುಂಬೈನ ಶಾಲೆಯೊಂದರ ಪ್ಯೂನ್‌ನನ್ನು ಶನಿವಾರ ಬಂಧಿಸಲಾಗಿದೆ.

39 ವರ್ಷದ ಆರೋಪಿ ಲೋವರ್ ಪರೇಲ್ ನಿವಾಸಿಯಾಗಿದ್ದು, ಕಳೆದ ಕೆಲವು ವರ್ಷಗಳಿಂದ ಶಾಲೆಯಲ್ಲಿ ಕೆಲಸ ಮಾಡುತ್ತಿದ್ದಾನೆ. ಆರೋಪಿ ಬಾಲಕಿಗೆ ಬೆದರಿಕೆ ಹಾಕಿದ್ದಾನೆ. ಆದ್ದರಿಂದ ಘಟನೆಯ ಬಗ್ಗೆ ಯಾರಿಗೂ ಹೇಳಲಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

ಇತ್ತೀಚೆಗಷ್ಟೇ ಆಕೆಗೆ ಸರಿಯಾಗಿ ನಡೆಯಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಮನೆಯವರು ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅಲ್ಲಿನ ವೈದ್ಯರು, ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ಪೋಷಕರಿಗೆ ತಿಳಿಸಿದ್ದು, ಬಳಿಕ ಬಾಲಕಿ ಎಲ್ಲವನ್ನು ಹೇಳಿದ್ದಾಳೆ.

ಆಕೆಯ ಪೋಷಕರ ದೂರಿನ ಆಧಾರದ ಮೇಲೆ ಪೊಲೀಸ್ ಅಧಿಕಾರಿಗಳು ಆರೋಪಿ ಪ್ಯೂನ್‌ ನನ್ನು ಬಂಧಿಸಿದ್ದಾರೆ.

ಪ್ಯೂನ್ 2023 ರ ಡಿಸೆಂಬರ್ ನಿಂದ 2024 ರ ಮಾರ್ಚ್ ನಡುವೆ ಅಪ್ರಾಪ್ತ ಬಾಲಕಿಯನ್ನು ಶಾಲೆಯ ನೆಲ ಅಂತಸ್ತಿನ ಮೆಟ್ಟಿಲುಗಳ ಕೆಳಗೆ ಇರುವ ಸ್ಟೋರ್ ರೂಂಗೆ ಕರೆದೊಯ್ದು ಥಳಿಸಿ. ಅಸ್ವಾಭಾವಿಕ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಪ್ರಸ್ತುತ, ಶಾಲಾ ಆಡಳಿತ ಮಂಡಳಿ ಮತ್ತು ಪೊಲೀಸರು ಆರೋಪಿಯು ಇತರ ಮಕ್ಕಳನ್ನೂ ಗುರಿಯಾಗಿಸಿಕೊಂಡಿದ್ದಾನೆಯೇ ಎಂದು ತಿಳಿಯಲು ಪ್ರಯತ್ನಿಸುತ್ತಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read