ಆಹಾರ ವಿತರಣಾ ಸಂಸ್ಥೆ ಸ್ವಿಗ್ಗಿಯ ಡೆಲಿವರಿ ಏಜೆಂಟರೊಬ್ಬರ ಬೈಕು ನಡು ರಸ್ತೆಯಲ್ಲೇ ಹೊತ್ತಿ ಉರಿದಿರುವ ಘಟನೆ ದಕ್ಷಿಣ ಮುಂಬೈನ ನಾಗಪಾಡ ಏರಿಯಾದಲ್ಲಿ ನಡೆದಿದೆ. ಇದರ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಮಂಗಳವಾರ ಮಧ್ಯಾಹ್ನದ ಸುಮಾರಿಗೆ ಈ ಘಟನೆ ನಡೆದಿದ್ದು, ಸ್ವಿಗ್ಗಿ ಏಜೆಂಟ್ ಡೆಲಿವರಿಗೆ ತೆರಳುತ್ತಿದ್ದ ವೇಳೆ ಬೈಕಿಗೆ ಬೆಂಕಿ ತಗುಲಿದೆ. ನೋಡ ನೋಡುತ್ತಿದ್ದಂತೆ ಇದು ಸಂಪೂರ್ಣವಾಗಿ ವ್ಯಾಪಿಸಿದ್ದು, ಆತ ಅಸಹಾಯಕನಾಗಿ ನೋಡುತ್ತಾ ನಿಂತಿದ್ದಾನೆ.
ಬಳಿಕ ಅಗ್ನಿಶಾಮಕ ದಳಕ್ಕೆ ಕರೆ ಮಾಡಿದ್ದು, ಸ್ಥಳಕ್ಕೆ ಬಂದ ಅವರು ಅರ್ಧ ಗಂಟೆಗಳ ಕಾಲ ಶ್ರಮಿಸಿ ಬೆಂಕಿ ನಂದಿಸಿದ್ದಾರೆ ಆದರೆ ಅಷ್ಟರೊಳಗಾಗಿ ಬೈಕು ಸುಟ್ಟು ಕರಕಲಾಗಿದೆ. ಇದರ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
https://twitter.com/sirajnoorani/status/1625415104144748544?ref_src=twsrc%5Etfw%7Ctwcamp%5Et