ಮುಂಬೈ: ಮುಂಬೈನಲ್ಲಿ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ಕುಸಿದು ಅವಘಡ ಸಂಭವಿಸಿದೆ. ಚಲಿಸುತ್ತಿದ್ದ ವಾಹನಗಳ ಮೇಲೆಯೇ ಏಕಾಏಕಿ ಮೆಟ್ರೋ ಪಿಲ್ಲರ್ ಕುಸಿದು ಬಿದ್ದಿರುವ ಘಟನೆ ನಡೆದಿದೆ.
ಮುಂಬೈನ ಪಶ್ಚಿಮ ಮುಲುಂದ್ ನಲ್ಲಿರುವ ಎಲ್ ಬಿಎಸ್ ರಸ್ತೆಯ ಜಾನ್ಸನ್ ಆಂಡ್ ಜಾನ್ಸನ್ ಕಂಪನಿಯ ಬಳಿ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ಕುಸಿದು ಬಿದ್ದಿದೆ. ಆಟೋ, ಕಾರು ಹಾಗೂ ದ್ವಿಚಕ್ರವಾಹನಗಳ ಮೇಲೆ ಸ್ಬ್ಯಾಬ್ ಗಳು ಬಿದ್ದಿರುವ ಪರಿಣಾಮ ವಾಹನಗಳು ಜಖಂಗೊಂಡಿವೆ. ವಾಹನಗಳಲ್ಲಿ ಸಿಲುಕಿರುವ ನಾಲ್ಕು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಆಟೋದಲ್ಲಿ ಸಿಲುಕಿರುವವರನ್ನು ಹೊರತೆಗೆಯಲು ಸ್ಥಳೀಯರು ಹರಸಾಹಸ ಪಟ್ಟಿದ್ದಾರೆ. ಇಂದು ಮಧ್ಯಾಹ್ನ ಈ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಅಧಿಕಾರಿಗಳು ದೌಡಾಯಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.

