BIG NEWS: ಮುಮ್ತಾಜ್ ಅಲಿ ನಾಪತ್ತೆ ಹಿಂದೆ ಮಹಿಳೆ ಕೈವಾಡ? ನಾಲ್ವರು ಸೇರಿ ಬ್ಲಾಕ್ ಮೇಲ್ ಮಾಡುತ್ತಿದ್ದ ಬಗ್ಗೆ ಗುಮಾನಿ

ಮಂಗಳೂರು: ಮಾಜಿ ಶಾಸಕ ಮೊಯುದ್ದೀನ್ ಬಾವಾ ಸಹೋದರ ಮುಮ್ತಾಜ್ ಅಲಿ ನಾಪತ್ತೆ ಪ್ರಕರಣದ ಹಿಂದೆ ಮಹಿಳೆಯೊಬ್ಬರ ಕೈವಾಡವಿರುವ ಶಂಕೆ ವ್ಯಕ್ತವಾಗಿದೆ.

ಮಹಿಳೆ ಹಾಗೂ ಇನ್ನೂ ನಾಲ್ವರು ಸೇರಿ ಮುಮ್ತಾಜ್ ಅಲಿ ಅವರಿಗೆ ಬ್ಲ್ಯಾಕ್ ಮೇಲ್ ಮಾಡುತ್ತಿದ್ದರು. ಇದರಿಂದ ಬೇಸತ್ತು ಮುಮ್ತಾಜ್ ಅಲಿ ಆತ್ಮಹತ್ಯೆಯಂತಹ ದುಡುಕಿನ ನಿರ್ಧಾರ ಕೈಗೊಂಡಿದ್ದಾರೆಯೇ? ಎಂಬ ಅನುಮಾನ ವ್ಯಕ್ತವಾಗಿದೆ.

ಮಹಿಳೆಯೊಬ್ಬರು ಮುಮ್ತಾಜ್ ಅಲಿಗೆ ಮದುವೆಯಾಗುವಂತೆ ಪೀಡಿಸುತ್ತಿದ್ದರು. ನಿರಂತರವಾಗಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದರು. ಇದೇ ವೇಳೆ ಮಸೀದಿ ವಿಚಾರವಾಗಿಯೂ ಸುರತ್ಕಲ್ ಮೂಲದ ನಾಲ್ವರೊಂದಿಗೆ ಮುಮ್ತಾಜ್ ಅಲಿ ಗಲಾಟೆ ಮಾಡಿಕೊಂಡಿದ್ದರು ಎನ್ನಲಾಗಿದೆ.

ಈ ನಾಲ್ವರು ಮಹಿಳೆಗೆ ಸಹಕಾರ ನೀಡಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದರು ಎಂಬ ಗುಮಾನಿಯಿದೆ. ಮಹಿಳೆಯ ನಿರಂತರ ಕಿರುಕುಳದಿಂದ ನೊಂದು ಮುಮ್ತಾಜ್ ಅಲಿ ದುಡುಕಿನ ನಿರ್ಧರ ಮಾಡಿದ್ರಾ? ಎಂಬ ಶಂಕೆ ವ್ಯಕ್ತವಾಗಿದ್ದು, ಈ ನಿಟ್ಟಿನಲ್ಲಿ ತನಿಖೆ ಮುಂದುವರೆದಿದೆ.

ಇನ್ನೊಂದೆಡೆ ಕೂಳೂರು ಸೇತುವೆ ಮೇಲೆ ಮುಮ್ತಾಜ್ ಅಲಿ ಅವರ ಕಾರು ಡ್ಯಾಮೇಜ್ ಆಗಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಮುಳುಗುತಜ್ಞರು, ಪೊಲೀಸರಿಂದ ನದಿಯಲ್ಲಿ ಮುಮ್ತಾಜ್ ಅಲಿಗಾಗಿ ಶೋಧ ಕಾರ್ಯಾಚರಣೆ ಕೂಡ ಮುಂದುವರೆದಿದೆ

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read