BREAKING NEWS: ಮುಮ್ತಾಜ್ ಅಲಿ ಆತ್ಮಹತ್ಯೆ ಕೇಸ್: ಮಹಿಳೆಯಿಂದ ಬ್ಲಾಕ್ ಮೇಲ್; ಆಕೆಯ ಪತಿಯೇ ಸಾಥ್

ಮಂಗಳೂರು: ಮಾಜಿ ಶಾಸಕ ಮೊಯಿದ್ದೀನ್ ಬಾವಾ ಸಹೋದರ ಮುಮ್ತಾಜ್ ಅಲಿ ಆತ್ಮಹತ್ಯೆ ಪ್ರಕರಣಕ್ಕೆ ಮಹಿಳೆ ಸೇರಿದಂತೆ 6 ಜನರ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಈಗಾಗಲೇ ಮೂವರನ್ನು ವಶಕ್ಕೆ ಪಡೆಯಲಾಗಿದೆ.

ಮಂಗಳೂರಿನ ಕಾವೂರು ಪೊಲೀಸ್ ಠಾಣೆಯಲ್ಲಿ 6 ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಮುಮ್ತಾಜ್ ಅಲಿ ಆತ್ಮಹತ್ಯೆಗೆ ಮಹಿಳೆಯ ಬ್ಲ್ಯಾಕ್ ಮೇಲ್ ಕಾರಣ ಎನ್ನಲಾಗಿದೆ. ಮಹಿಳೆ ರೆಹಮತ್ ಅಲಿಯಾಸ್ ಆಯೇಷಾ, ಮುಮ್ತಾಜ್ ಅಲಿ ಅವರಿಗೆ ಬ್ಲ್ಯಾಕ್ ಮೇಲ್ ಮಾಡುತ್ತಿದ್ದು, ಆಕೆಯ ಪತಿ ಶೋಯಬ್ ಸಾಥ್ ನೀಡಿದ್ದ ಎಂಬ ಬಾಹಿತಿ ಬಹಿರಂಗವಾಗಿದೆ. ಪ್ರಕರಣದಲ್ಲಿ ಶೋಯಬ್ ಐದನೇ ಆರೋಪಿಯಾಗಿದ್ದಾನೆ ಎಂದು ಮಂಗಳೂರು ಪೊಲೀಸ್ ಕಮಿಷರ್ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ.

ರೆಹಮತ್ ಅಲಿಯಾಸ್ ಆಯೇಷಾ ಮಗು ಜೊತೆಗೆ ಮುಮ್ತಾಜ್ ಅಲಿ ಆಟವಾಡುತ್ತಿದ್ದ ವಿಡಿಯೋವನ್ನು ರೆಹಮತ್ ತನ್ನ ಸ್ಟೇಟಸ್ ಗೆ ಹಾಕಿದ್ದಳು. ಇದರಿಂದ ಮುಮ್ತಾಜ್ ಅಲಿ ಮನೆಯಲ್ಲಿ ರಾತ್ರಿಯವರೆಗೂ ಜಗಳವಾಗಿತ್ತು. ಮಾರನೆ ದಿನ ಬೆಳಿಗ್ಗೆ ಮುಮ್ತಾಜ್ ಅಲಿ ಕೂಳೂರು ಸೇತುವೆ ಮೇಲಿಂದ ನದಿಗೆ ಹಾರಿ ಆತ್ಮಹತ್ಯೆಗೆ ಶರಣಗಾದಿದ್ದಾರೆ. ಅ.6ರಂದು ಮುಮ್ತಾಜ್ ಅಲಿ ಆತ್ಮಹತ್ಯೆಗೆ ಶರಣಾಗಿದ್ದು, ಇಂದು ಬೆಳಿಗ್ಗೆ ಅವರ ಮೃತದೇಹ ಪತ್ತೆಯಾಗಿದೆ.

ಪ್ರಕರಣ ಸಂಬಂಧ ಈಗಾಗಲೇ ಮೂವರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದ್ದು, ಇನ್ನೂ ಮೂವರಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read