ಬೆಳಗಾವಿ: ಮುನವಳ್ಳಿ ಪುರಸಭೆ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ನೇತೃತ್ವದಲ್ಲಿ ಮುನವಳ್ಳಿ ಪುರಸಭೆ ಮೇಲೆ ದಾಳಿ ನಡೆದಿದ್ದು, ದಾಖಲೆಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ. ಲೋಕಾಯುಕ್ತ ಎಸ್ ಪಿ ಹನುಮಂತರಾಯ ಹಾಗೂ ಸಿಬ್ಬಂದಿಗಳು ಸಾಥ್ ನೀಡಿದ್ದಾರೆ.
ಕಚೇರಿಯಲ್ಲಿ ಜನರಿಂದ ಖುದ್ದು ಮಾಹಿತಿಯನ್ನು ಪಡೆದಿದ್ದಾರೆ. ಜನರಿಗೆ ದಾಖಲೆಗಳನ್ನು ಕೊಡಲು ಅಧಿಕಾರಿಗಳು ವಿಳಂಬ ಮಾಡುತ್ತಿದ್ದಾರೆ ಎಂಬ ಆರೋಪಗಳು ಕೇಳಿಬಂದಿದ್ದು, ಈ ಹಿನ್ನಲೆಯಲ್ಲಿ ದಾಳಿ ನಡೆಸಲಾಗಿದೆ.