BIG NEWS: ಮುಂಡ್ರೋಡು ಮೀಸಲು ಅರಣ್ಯದಲ್ಲಿ ಸಾವಿರಾರು ಮರಗಳ ಮಾರಣ ಹೋಮ; ತನಿಖೆಗೆ ಆದೇಶಿಸಿದ ಅರಣ್ಯ ಸಚಿವ

ಮಡಿಕೇರಿ: ಮುಂಡ್ರೋಡು ಮೀಸಲು ಅರಣ್ಯ ಪ್ರದೇಶದಲ್ಲಿ ಸಾವಿರಾರು ಮರಗಳ ಮಾರಣ ಹೋಮ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯ ಸಚಿವ ಈಶ್ವರ ಖಂಡ್ರೆ ತನಿಖೆಗೆ ಆದೇಶ ನೀಡಿದ್ದಾರೆ.

ಕೊಡಗು ಜಿಲ್ಲೆ ತಲಕಾವೇರಿ ಅಭಯಾರಣ್ಯದ ವಿರಾಜಪೇಟೆ ವಲಯದ ಮುಂಡ್ರೋಡು ಮೀಸಲು ಅರಣ್ಯದಲ್ಲಿ ಸಾವಿರಾರು ಮರಗಳನ್ನು ಕಡಿಯಲಾಗಿದೆ. ಮರ ಕಡಿದ ಬಗ್ಗೆ ಸಚಿವರ ಕಾರ್ಯಾಲಯಕ್ಕೆ ಮಾಹಿತಿ ನೀಡದೇ ನಿರ್ಲಕ್ಷ್ಯ ವಹಿಸಿದ ಅಧಿಕಾರಿಗಳ ವಿರುದ್ಧ ಸಚಿವ ಈಶ್ವರ ಖಂಡ್ರೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಕರ್ತವ್ಯಲೋಪವೆಸಗಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಸೂಚಿಸಿದ್ದಾರೆ.

239 ಮರಗಳನ್ನು ಕಡಿದ ವಿಚಾರವಾಗಿ ಏಪ್ರಿಲ್ 30ರಂದು ಮೂವರ ವಿರುದ್ಧ ಮುಂಡ್ರೋಡು ರೇಂಜ್ ಫಾರೆಸ್ಟ್ ಆಫೀಸರ್ ಪ್ರಕರಣ ದಾಖಲಿಸಿದ್ದರು. ಆದರೆ ಕೊಡಗು ಏಕೀಕರಣ ರಂಗದ ಕಾರ್ಯಕರ್ತರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಈ ಪ್ರದೇಶದಲ್ಲಿ ಸಾವಿರಾರು ಮರಗಳನ್ನು ಕಡಿಯಲಾಗಿದೆ. ಸೂಕ್ತ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read