GOOD NEWS: ಹೆಸರು ಬೆಳೆಗಾರರಿಗೆ ಕೇಂದ್ರದಿಂದ ಬಂಪರ್ ಕೊಡುಗೆ: ಬೆಂಬಲ ಬೆಲೆಯಲ್ಲಿ ಹೆಸರು ಕಾಳು ಖರೀದಿ ಹೆಚ್ಚಳ

ನವದೆಹಲಿ: ರಾಜ್ಯದ ಹೆಸರು ಬೆಳೆಗಾರರಿಗೆ ಕೇಂದ್ರ ಸರ್ಕಾರ ಬಂಪರ್ ಕೊಡುಗೆ ನೀಡಿದೆ. ಕರ್ನಾಟಕದಲ್ಲಿ ಬೆಂಬಲ ಬೆಲೆ ಯೋಜನೆಯಡಿ ಹೆಸರು ಕಾಳು ಖರೀದಿ ಹೆಚ್ಚಳಕ್ಕೆ ಕೇಂದ್ರ ಸರ್ಕಾರ ಆದೇಶ ನೀಡಿದೆ ಎಂದು ಕೇಂದ್ರ ಆಹಾರ ಪೂರೈಕೆ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.

2024-25ರ ಖಾರೀಫ್ ಋತುವಿನಲ್ಲಿ ಬೆಂಬಲ ಬೆಲೆಯಲ್ಲಿ ಒಟ್ಟು 38,320 ಮೆಟ್ರಿಕ್ ಟನ್ ಹೆಸರು ಕಾಳು ಖರೀದಿಗೆ ಅವಕಾಶ ಕಲ್ಪಿಸಿದೆ. ರಾಜ್ಯದಲ್ಲಿ ಹೆಸರು ಬೆಳೆಗಾರರು ಸಂಕಷ್ಟದಲ್ಲಿದ್ದು, ಬೆಂಬಲ ಬೆಲೆಯಲ್ಲಿ ಖರೀದಿ ಹೆಚ್ಚಿಸುವಂತೆ ಪ್ರಧಾನಿ ಮೋದಿ ಅವರನ್ನು ಮತ್ತು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಲ್ಲಿ ಮನವಿ ಮಾಡಿದ್ದೆ. ತಮ್ಮ ಮನವಿಗೆ ತ್ವರಿತ ಸ್ಪಂದನೆ ನೀಡಿ ಹೆಸರು ಕಾಳು ಖರೀದಿ ಹೆಚ್ಚಿಸಲು ಅನುಮತಿ ದೊರೆತಿದೆ ಎಂದು ತಿಳಿಸಿದರು.

ಈ ಮೊದಲು 22215 ಮೆಟ್ರಿಕ್ ಟನ್ ಹೆಸರು ಕಾಳು ಖರೀದಿಗೆ ಸೂಚಿಸಲಾಗಿತ್ತು. ಇದನ್ನು 38,320 ಮೆ.ಟನ್ ಗೆ ಹೆಚ್ಚಳ ಮಾಡಲಾಗಿದೆ. ಇದರಿಂದ ರಾಜ್ಯದ ಹೆಸರು ಬೆಳೆಗಾರರಿಗೆ ಹೆಚ್ಚು ಅನುಕೂಲವಾಗಲಿದೆ ಎಂದರು.

ಈಗಾಗಲೇ ರಾಜ್ಯದಲ್ಲಿ ಬೆಂಬಲ ಬೆಲೆಯಲ್ಲಿ 22215 ಮೆಟ್ರಿಕ್ ಟನ್ ಹೆಸರು ಕಾಳು ಸಂಗ್ರಹಿಸಿದ್ದು, ಹೆಚ್ಚುವರಿಯಾಗಿ 16105 ಮೆ.ಟನ್ ಹೆಸರು ಖರೀದಿ ಪ್ರಕ್ರಿಯೆ ನಡೆಯಲಿದೆ.

ರಾಜ್ಯ ಸರ್ಕಾರ ಮತ್ತು ಕೇಂದ್ರದ ನೋಡಲ್ ಏಜೆನ್ಸಿಗಳು ಈ ಕೂಡಲೇ ರಾಜ್ಯಾದ್ಯಂತ ಹೆಸರು ಕಾಳು ಖರೀದಿ ಕೇಂದ್ರಗಳನ್ನು ಸ್ಥಾಪಿಸಬೇಕು ಮತ್ತು ತ್ವರಿತವಾಗಿ ಖರೀದಿ ಪ್ರಕ್ರಿಯೆ ಪ್ರಾರಂಭಿಸಬೇಕು ಎಂದು ಸಚಿವರು ಸೂಚಿಸಿದ್ದಾರೆ. ಬೆಂಬಲ ಬೆಲೆ ನೀಡುವ ಮೂಲಕ ಕೇಂದ್ರ ಸರ್ಕಾರ ಸದಾ ರೈತರ ಬೆನ್ನಿಗೆ ನಿಂತಿದೆ ಎಂದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read