HomeKarnatakaಚುನಾವಣೆಗೆ ಗೈರು, ಪಕ್ಷಾಂತರ ಮಾಡಿದ್ದ ನಾಲ್ವರ ನಗರಸಭೆ ಸದಸ್ಯತ್ವ ಅನರ್ಹ: ಜಿಲ್ಲಾಧಿಕಾರಿ ಆದೇಶ

ಚುನಾವಣೆಗೆ ಗೈರು, ಪಕ್ಷಾಂತರ ಮಾಡಿದ್ದ ನಾಲ್ವರ ನಗರಸಭೆ ಸದಸ್ಯತ್ವ ಅನರ್ಹ: ಜಿಲ್ಲಾಧಿಕಾರಿ ಆದೇಶ

ಚಾಮರಾಜನಗರ: ಚಾಮರಾಜನಗರ ಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನದ ಚುನಾವಣೆಗೆ ಗೈರು ಹಾಜರಾಗಿದ್ದ ಹಾಗೂ ಪಕ್ಷಾಂತರ ಮಾಡಿದ್ದ ನಾಲ್ವರು ನಗರಸಭೆ ಸದಸ್ಯರ ಸದಸ್ಯತ್ವವನ್ನು ಅನರ್ಹಗೊಳಿಸಿ ಜಿಲ್ಲಾಧಿಕಾರಿ ಸಿ.ಟಿ. ಶಿಲ್ಪಾ ನಾಗ್ ಅವರು ಆದೇಶಿಸಿದ್ದಾರೆ.

2024ರ ಸೆಪ್ಟೆಂಬರ್ 9ರಂದು ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಸದಸ್ಯರಿಗೆ ಪಕ್ಷದ ಅಭ್ಯರ್ಥಿಯ ಪರವಾಗಿ ಮತ ಹಾಕುವಂತೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಪಿ. ಮರಿಸ್ವಾಮಿ ವಿಪ್ ಜಾರಿ ಮಾಡಿದ್ದರು. ಆದರೆ ಪಕ್ಷದ ಸದಸ್ಯರಾದ ಎಸ್.ಟಿ.  ನೀಲಮ್ಮ, ಭಾಗ್ಯ, ಆರ್‌.ಪಿ. ನಂಜುಂಡಸ್ವಾಮಿ ಅವರು ಉಲ್ಲಂಘಿಸಿ ಚುನಾವಣೆಗೆ ಗೈರು ಹಾಜರಾಗಿದ್ದರು. ಮತ್ತೊಬ್ಬ ಸದಸ್ಯೆ ಬಿ.ಎಸ್. ಚಂದ್ರಕಲಾ ಬಿಜೆಪಿ ಅಭ್ಯರ್ಥಿ ಪರವಾಗಿ ಕೈ ಎತ್ತುವ ಮೂಲಕ ಮತ ಹಾಕಿದ್ದರು.

ಈ ಸಂಬಂಧ ಮರಿಸ್ವಾಮಿ ಮತ್ತು ಕಾಂಗ್ರೆಸ್ ಸದಸ್ಯ ಆರ್.ಎಂ. ರಾಜಪ್ಪ ಅವರು ವಿಪ್ ಉಲ್ಲಂಘನೆ ಮಾಡಿದ ನಾಲ್ವರ ಸದಸ್ಯತ್ವ ಅನರ್ಹಗೊಳಿಸಬೇಕು ಎಂದು ಕರ್ನಾಟಕ ಸ್ಥಳೀಯ ಪ್ರಾಧಿಕಾರಗಳ ಪಕ್ಷಾಂತರ ನಿಷೇಧ ಅಧಿನಿಯಮದ ಅಡಿ ದೂರು ನೀಡಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಸಂಬಂಧ ಜಿಲ್ಲಾಧಿಕಾರಿ ನ್ಯಾಯಾಲಯದಲ್ಲಿ ವಾದ ವಿವಾದ ಆಲಿಸಿದ ಶಿಲ್ಪಾ ನಾಗ್ ಅವರು ನಾಲ್ವರು ಸದಸ್ಯರು ಉದ್ದೇಶಪೂರ್ವಕವಾಗಿ ಪಕ್ಷದ ವಿರುದ್ಧ ಮತ ಚಲಾಯಿಸಿರುವುದು ಮತ್ತು ಗೈರು ಹಾಜರಾಗಿರುವುದು ಸಾಬೀತಾಗಿದ್ದರಿಂದ ನಾಲ್ವರ ಸದಸ್ಯತ್ವವನ್ನು ಅನರ್ಹಗೊಳಿಸಿ ಆದೇಶ ಹೊರಡಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular