HomeKarnatakaಮುಷ್ಕರ ಕೈಗೊಂಡ ಪೌರ ಕಾರ್ಮಿಕರು, ಮನೆ ಮನೆಗೆ ತೆರಳಿ ಕಸ ಸಂಗ್ರಹಿಸಿದ ನಗರಸಭೆ ಅಧ್ಯಕ್ಷ

ಮುಷ್ಕರ ಕೈಗೊಂಡ ಪೌರ ಕಾರ್ಮಿಕರು, ಮನೆ ಮನೆಗೆ ತೆರಳಿ ಕಸ ಸಂಗ್ರಹಿಸಿದ ನಗರಸಭೆ ಅಧ್ಯಕ್ಷ

ಹಾಸನ: ನೇರ ವೇತನ ಪಾವತಿಗೆ ಆಗ್ರಹಿಸಿ ನಗರಸಭೆ ಹೊರಗುತ್ತಿಗೆ ನೌಕರರು ಮುಷ್ಕರ ಕೈಗೊಂಡಿದ್ದಾರೆ. ಹಾಸನ ನಗರಸಭೆ ಹೊರಗುತ್ತಿಗೆ, ಕಸ ಸಂಗ್ರಹ ಆಟೋ ಚಾಲಕರು ಮುಷ್ಕರ ಕೈಗೊಂಡಿದ್ದು, ಕಳೆದ ಒಂದು ವಾರದಿಂದ ಕಸ ಸಂಗ್ರಹ ಕಾರ್ಯ ಸಂಪೂರ್ಣ ಸ್ಥಗಿತವಾಗಿದೆ.

ಇದರಿಂದಾಗಿ ಜನರಿಗೆ ತೊಂದರೆಯಾಗಿದ್ದು, ಹಾಸನ ನಗರಸಭೆ ಅಧ್ಯಕ್ಷ ಮೋಹನ್ ಖುದ್ದಾಗಿ ತಾವೇ ಕಸ ಸಂಗ್ರಹಕ್ಕೆ ಇಳಿದಿದ್ದಾರೆ. 34ನೇ ವಾರ್ಡ್ ವ್ಯಾಪ್ತಿಯಲ್ಲಿ ಕೆಲವು ಸದಸ್ಯರೊಂದಿಗೆ ಕಸ ಸಂಗ್ರಹಿಸತೊಡಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮನೆ ಮನೆಗೆ ತೆರಳಿ ನಗರಸಭೆ ಅಧ್ಯಕ್ಷ ಮೋಹನ್ ಕಸ ಸಂಗ್ರಹಿಸುತ್ತಿದ್ದಾರೆ. ಆಟೋ ಚಾಲನೆ ಮಾಡಿಕೊಂಡು ಕಸ ಸಂಗ್ರಹಿಸುತ್ತಿರುವ ಮೋಹನ್ ಅವರಿಗೆ ನಗರಸಭೆ ಕೆಲವು ಸದಸ್ಯರು ಕೂಡ ಸಾಥ್ ನೀಡಿದ್ದಾರೆ. ನಗರಸಭೆ ಅಧ್ಯಕ್ಷರ ಕಾರ್ಯಕ್ಕೆ ಸಾರ್ವಜನಿಕರಿಂದ ಅಪಾರ ಮೆಚ್ಚುಗೆ ವ್ಯಕ್ತವಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular