ಬೆಂಗಳೂರು : ಬೀದರ್ನ ಬ್ರಿಮ್ಸ್ ಆಸ್ಪತ್ರೆಯ ಶವಾಗಾರದಲ್ಲಿ ಮೃತ ಮಹಿಳೆಯರ ಬೆತ್ತಲೆ ಫೋಟೋಗಳನ್ನು ತೆಗೆದು ವಿಕೃತಿ ಮೆರೆದಿರುವ ಆಟೆಂಡರ್ ಮುನೀರ್ ಅಹಮದ್ನ ಅಮಾನುಷ ಕೃತ್ಯ ಇಡೀ ಸಮಾಜ ತಲೆತಗ್ಗಿಸುವಂತದ್ದಾಗಿದೆ.
ಈ ಘಟನೆಗೆ ರಾಜ್ಯ ಮಹಿಳಾ ಆಯೋಗ ಪ್ರತಿಕ್ರಿಯಿಸಿದ್ದು, ತಪ್ಪಿತಸ್ಥನ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದೆ. , ಬೀದರ್ ಜಿಲ್ಲೆಯ ಬ್ರಿಮ್ಸ್ ಆಸ್ಪತ್ರೆಯ ಶವಾಗಾರದಲ್ಲಿ, ಅಟೆಂಡರ್ ಮುನೀರ್ ಅಹಮದ್ ಎಂಬಾತ ಸತ್ತ ಮಹಿಳೆಯರ ಬೆತ್ತಲೆ ಫೋಟೋಗಳನ್ನು ಶೂಟ್ ಮಾಡಿ ವಿಕೃತಿ ಮೆರೆದಿರುವ ಘಟನೆ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.
ಸಾವಿನ ನಂತರವೂ ಮಹಿಳೆಯರ ಘನತೆಗೆ ಧಕ್ಕೆ ತಂದಿರುವ ಈ ಪ್ರಕರಣವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದೇನೆ. ಈ ಕೂಡಲೇ ನಿಯಮಾನುಸಾರ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥನ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಹಾಗೂ ಈ ಕುರಿತು ಶೀಘ್ರವೇ ಆಯೋಗಕ್ಕೆ ವರದಿ ಸಲ್ಲಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರಿಗೆ ಪತ್ರದ ಮೂಲಕ ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದೇನೆ ಎಂದು ಮಹಿಳಾ ಆಯೋಗದ ಕಾರ್ಯದರ್ಶಿಗಳು ಸುತ್ತೋಲೆ ಹೊರಡಿಸಿದ್ದಾರೆ.
ಏನಿದೆ ಸುತ್ತೋಲೆಯಲ್ಲಿ..?
ಮೇಲ್ಕಂಡ ವಿಷಯ ಹಾಗೂ ಉಲ್ಲೇಖಕ್ಕೆ ಸಂಬಂಧಿಸಿದಂತೆ, ಬೀದರ್ ಜಿಲ್ಲೆಯ ಬ್ರಿಮ್ಸ್ ಆಸ್ಪತ್ರೆಯ ಶವಾಗಾರದಲ್ಲಿ, ಅಟೆಂಡರ್ ಮುನೀರ್ ಅಹಮದ್ ಎಂಬಾತ ಸತ್ತ ಮಹಿಳೆಯರ ಬೆತ್ತಲೆ ಫೋಟೋಗಳನ್ನು ಶೂಟ್ ಮಾಡಿ ವಿಕೃತಿ ಮೆರೆದಿರುವ ಅಮಾನವೀಯ ಕೃತ್ಯದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವರದಿಯಾಗಿರುತ್ತದೆ.
ಆದ್ದರಿಂದ ಸದರಿ ಪ್ರಕರಣದ ಬಗ್ಗೆ ನಿಯಮಾನುಸಾರ ಪರಿಶೀಲಿಸಿ, ಮುನೀರ್ ಅಹಮದ್ ವಿರುದ್ಧ ಸೂಕ್ತ ಕ್ರಮ ಕೈಗೊಂಡು, ವರದಿ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡುವಂತೆ ಕೋರಿದೆ.


