BIG NEWS: ಮುನಿರತ್ನ ಮಾತಿಗೆ ಕನ್ನಡಿ ಹಿಡಿಯುವ ಅಗತ್ಯವಿಲ್ಲ; ಅವರ ಸ್ಥಿತಿ ಮಾಡಿದ್ದುಣ್ಣೋ ಮಾರಾಯ ಅಷ್ಟೇ: ಬಿಜೆಪಿ ಶಾಸಕನ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಾಗ್ದಾಳಿ

ಬೆಳಗಾವಿ: ಜೀವ ಬೆದರಿಕೆ, ನಿಂದನೆ ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ ಬಿಜೆಪಿ ಶಾಸಕ ಮುನಿರತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಮುನಿರತ್ನ ಬಂಧನದ ಹಿಂದೆ ಯಾವುದೇ ದ್ವೇಷ ರಾಜಕಾರಣವಿಲ್ಲ, ಅವರದ್ದು ಮಾಡಿದ್ದುಣ್ಣೋ ಮಾರಾಯ ಸ್ಥಿತಿ ಅಷ್ಟೇ ಎಂದು ಖಡಕ್ ಆಗಿ ಹೇಳಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಮನಿರತ್ನ ವಿಚಾರದಲ್ಲಿ ದ್ವೇಷ ರಾಜಕಾರಣ ಎಂಬುದು ಸುಳ್ಳು. ಅವರು ಏನು ಮಾತನಾಡಿದ್ದಾರೆ ಎಂಬುದು ಎಲ್ಲರಿಗೂ ಗೊತ್ತಿದೆ. ಹಾಗಾಗಿ ಮಾಡಿದ್ದುಣ್ಣೋ ಮಾರಾಯ ಎಂದು ಕಿಡಿಕಾರಿದರು.

ಮುನಿರತ್ನ ಆಡಿಯೋ ಎಲ್ಲೆಡೆ ವೈರಲ್ ಆಗಿದೆ. ಅವರು ಏನು ಮಾತನಾಡಿದ್ದಾರೆ ಎಂಬುದು ಎಲ್ಲರಿಗೂ ಗೊತ್ತಾಗಿದೆ. ಇದಕ್ಕೆ ಕನ್ನಡಿ ಹಿಡಿಯುವ ಅವಶ್ಯಕತೆ ಇಲ್ಲ. ಮುನಿರತ್ನ ಅವರು ಮಹಿಳೆಯರ ಬಗ್ಗೆ ಆಡಿರುವ ಕೀಳು ಮಾತುಗಳನ್ನು ಯಾರೂ ಕೂಡ ಸಹಿಸಲು ಸಾಧ್ಯವಿಲ್ಲ. ಜಾತಿ, ಜಾತಿಗಳ ಮಧ್ಯೆ ಸಂಘರ್ಷ ತರುವಂತಹ ಮಾತುಗಳನ್ನು ಯಾರೂ ಕೂಡ ಆಡಬಾರದು ಎಂದು ಆಕ್ರೋಶ ವ್ಯಕ್ತಪಡಿಸಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read