HomeKarnatakaBIG NEWS: ಶಾಸಕ ಮುನಿರತ್ನ ವಿರುದ್ಧ ಮಹಿಳಾ ಆಯೋಗಕ್ಕೆ ದೂರು ನೀಡಲು ಮುಂದಾದ ಕಾಂಗ್ರೆಸ್

BIG NEWS: ಶಾಸಕ ಮುನಿರತ್ನ ವಿರುದ್ಧ ಮಹಿಳಾ ಆಯೋಗಕ್ಕೆ ದೂರು ನೀಡಲು ಮುಂದಾದ ಕಾಂಗ್ರೆಸ್

ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ರಾಜ್ಯ ಮಹಿಳಾ ಆಯೋಗಕ್ಕೆ ದೂರು ನೀಡಲು ರಾಜ್ಯ ಕಾಂಗ್ರೆಸ್ ಮಹಿಳಾ ಘಟಕ ಮುಂದಾಗಿದೆ.

ಈ ಬಗ್ಗೆ ಮಾಜಿ ಶಾಸಕಿ, ಮಹಿಳಾ ಕಾಂಗ್ರೆಸ್ ಪ್ರಧಾನಕಾರ್ಯದರ್ಶಿ ಸೌಮ್ಯಾ ರೆಡ್ಡಿ ಮಾಹಿತಿ ನೀಡಿದ್ದು, ಶಾಸಕರಾಗಲಿ, ಸಂಸದರಾಗಲಿ, ಯಾರೇ ಆಗಿರಲಿ ಮಹಿಳೆಯರ ಬಗ್ಗೆ ಕೀಳುಮಟ್ಟದ ಪದ ಬಳಕೆ ಮಾಡಿದ್ದು, ಅಶ್ಲೀಲವಾಗಿ, ಅಗೌರವಯುತವಾಗಿ ಮಾತನಾಡಿರುವುದು ತಪ್ಪು. ಶಾಸಕ ಮುನಿರತ್ನ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ರಾಜ್ಯ ಮಹಿಳಾ ಆಯೋಗಕ್ಕೆ ದೂರು ನೀಡುವುದಾಗಿ ತಿಳಿಸಿದ್ದಾರೆ.

ಜಾತಿ, ಧರ್ಮದ ಬಗ್ಗೆಯಾಗಲಿ, ಮಹಿಳೆಯರ ಬಗ್ಗೆಯಾಗಲಿ ಕೆಟ್ಟದಾಗಿ ಮಾತನಾಡುವುದು ಸರಿಯಲ್ಲ. ಶಾಸಕ ಮುನಿರತ್ನ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗಿದ್ದು, ಮಹಿಳೆಯರ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಾರೆ. ತಕ್ಷಣ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮಹಿಳಾ ಆಯೋಗಕ್ಕೆ ಒತ್ತಾಯಿಸುತ್ತೇವೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular