HomeKarnatakaBIG NEWS: ಮುನಿರತ್ನ ವಿರುದ್ಧ ಸಿಡಿದೆದ್ದ ಮಹಿಳಾ ಕಾಂಗ್ರೆಸ್: ಸೌಮ್ಯಾ ರೆಡ್ಡಿ ನೇತೃತ್ವದಲ್ಲಿ ಪ್ರತಿಭಟನೆ

BIG NEWS: ಮುನಿರತ್ನ ವಿರುದ್ಧ ಸಿಡಿದೆದ್ದ ಮಹಿಳಾ ಕಾಂಗ್ರೆಸ್: ಸೌಮ್ಯಾ ರೆಡ್ಡಿ ನೇತೃತ್ವದಲ್ಲಿ ಪ್ರತಿಭಟನೆ

ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಮಹಿಳಾ ಕಾಂಗ್ರೆಸ್ ಸಿಡಿದೆದ್ದಿದ್ದು, ರಾಜ್ಯ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಬೆಂಗಳೂರಿನ ಕೆಪಿಸಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ.

ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯಾ ರೆಡ್ಡಿ ನೇತೃತ್ವದಲ್ಲಿ ಕೆಪಿಸಿಸಿ ಕಚೇರಿ ಎದುರು ಕಾಂಗ್ರೆಸ್ ಮಹಿಳಾ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಮುನಿರತ್ನ ಅವರಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿದ್ದಾರೆ.

ಪ್ರತಿಭಟನೆ ವೇಳೆ ಮಾತನಾಡಿದ ಮಾಜಿ ಶಾಸಕಿ ಸೌಮ್ಯಾ ರೆಡ್ಡಿ, ಬಿಜೆಪಿ ಶಾಸಕ ಮುನಿರತ್ನ ಹೆಣ್ಣು ಮಕ್ಕಳ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಾರೆ. ಅಶ್ಲೀಲವಾಗಿ ನಿಂದಿಸಿದ್ದಾರೆ. ಆದಾಗ್ಯೂ ಕೂಡ ಬಿಜೆಪಿ ಮೌನವಾಗಿರುವುದು ಯಾಕೆ? ಬಿಜೆಪಿಯವರಿಗೆ ಹೆಣ್ಣುಮಕ್ಕಳ ಬಗ್ಗೆ ಗೌರವವಿಲ್ಲವೇ? ಮುನಿರತ್ನ ಅವರನ್ನು ಪಕ್ಷದಿಂದ ಉಚ್ಛಾಟಿಸಿ, ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ಒತ್ತಾಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮುನಿರತ್ನ ಮಹಿಳೆಯರಿಗೆ ಅವಮಾನ ಮಾಡಿದ್ದಾರೆ. ಕೀಳು ಮಟ್ಟದಲ್ಲಿ ಮಾತನಾಡಿರುವ ಆಡಿಯೋ ವೈರಲ್ ಆಗಿದೆ. ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

 

For Latest News Updates, Join Our Whatsapp Community🚩
RELATED ARTICLES

Most Popular