HomeKarnatakaBIG NEWS: ಶಾಸಕ ಮುನಿರತ್ನ ಆಡೀಯೋ ಕೇಸ್: ಸಿಎಂ ಭೇಟಿಯಾದ ಗುತ್ತಿಗೆದಾರ ಚಲುವರಾಜು

BIG NEWS: ಶಾಸಕ ಮುನಿರತ್ನ ಆಡೀಯೋ ಕೇಸ್: ಸಿಎಂ ಭೇಟಿಯಾದ ಗುತ್ತಿಗೆದಾರ ಚಲುವರಾಜು

ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಜೀವ ಬೆದರಿಕೆ, ಜಾತಿ ನಿಂದನೆ, ಅಶ್ಲೀಲ ಪದ ಬಳಕೆ ಪ್ರಕರಣದಡಿ ದೂರು ನೀಡಿರುವ ಗುತ್ತಿಗೆದಾರ ಚಲುವರಾಜು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದರೆ.

ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಭೇಟಿಯಾದ ಗುತ್ತಿಗೆದಾರ ಚಲುವರಾಜು, ಶಾಸಕ ಮುನಿರತ್ನ ವಿರುದ್ಧ ದೂರು ನೀಡಿದರು. ಅಲ್ಲದೇ ಜೀವ ಬೆದರಿಕೆ ಹಾಕಿ ಜಾತಿ ನಿಂದನೆ ಮಾಡಿ ಅವಾಚ್ಯವಾಗಿ ನಿಂದಿಸಿರುವ ಶಾಸಕ ಮುನಿರತ್ನ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಮುನಿರತ್ನ ವಿರುದ್ಧ FIR ಆದ ಬಳಿಕ ಪೊಲೀಸರು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಈ ನಿಟ್ಟಿನಲ್ಲಿ ಕ್ರಮಕ್ಕೆ ಮುಂದಾಗಬೇಕು ಎಂದು ಮನವಿ ಮಾಡಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular