HomeKarnatakaಮುನಿರತ್ನ ಪ್ರಕರಣ: ಆಡಿಯೋ ಅವರದ್ದೇ ಎಂದು ಖಚಿತವಾದರೆ ಕಾನೂನು ಕ್ರಮ: ಗೃಹ ಸಚಿವ ಪರಮೇಶ್ವರ್

ಮುನಿರತ್ನ ಪ್ರಕರಣ: ಆಡಿಯೋ ಅವರದ್ದೇ ಎಂದು ಖಚಿತವಾದರೆ ಕಾನೂನು ಕ್ರಮ: ಗೃಹ ಸಚಿವ ಪರಮೇಶ್ವರ್

ತುಮಕೂರು: ಗುತ್ತಿಗೆದಾರನಿಗೆ ಜೀವ ಬೆದರಿಕೆ, ಜಾತಿ ನಿಂದನೆ, ಮಹಿಳೆಯರ ಬಗ್ಗೆ ಕೀಳುಮಟ್ಟದ ಪದಬಳಕೆ ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವರು, ಈಗಾಗಲೇ ಮುನಿರತ್ನ ಅವರನ್ನು ಪೊಲೀಸರು ಬಂಧಿಸಿದ್ದು, ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ. ಆಡಿಯೋವನ್ನು ಎಫ್ಎಸ್ಎಲ್ ಗೆ ರವಾನಿಸಲಾಗಿದೆ. ಆಡಿಯೋ ಅವರದ್ದಾ, ಅಥವಾ ಅಲ್ಲವಾ ಎಂಬ ಬಗ್ಗೆ ಪರೀಕ್ಷಿಸಿ ದೃಧಪಡಿಸುತ್ತಾರೆ. ಅವರದ್ದೇ ಆಡಿಯೋ ಎಂದಾದರೆ ಕಾನೂನು ಪ್ರಕಾರ ಕ್ರಮ ಜರುಗಿಸಲಾಗುವುದು ಎಂದರು.

ಇದೇ ವೇಳೆ ನಾಗಮಂಗಲ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ವರದಿ ಬರುವವರೆಗೂ ನಾನು ಏನೂ ಹೇಳುವುದಿಲ್ಲ ಎಂದು ತಿಳಿಸಿದರು. ವರದಿ ಬಂದ ಬಳಿಕ ಎಲ್ಲವೂ ಗೊತ್ತಾಗಲಿದೆ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular