BREAKING NEWS: ಬಿಜೆಪಿ ಶಾಸಕ ಮುನಿರತ್ನಗೆ ಜಾಮೀನು ಮಂಜೂರು

ಬೆಂಗಳೂರು: ಗುತ್ತಿಗೆದಾರನಿಗೆ ಜೀವ ಬೆದರಿಕೆ, ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿದ್ದ ಆರ್.ಆರ್.ನಗರ ಬಿಜೆಪಿ ಶಾಸಕ ಮುನಿರತ್ನಗೆ ಜಾಮೀನು ಮಂಜೂರಾಗಿದೆ.

ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್, ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. 2 ಲಕ್ಷ ಬಾಂಡ್, ಇಬ್ಬರ ಶ್ಯೂರಿಟಿ ಒದಗಿಸುವಂತೆ ಸೂಚಿಸಿ ನ್ಯಾ. ಗಜಾನನ ಭಟ್ ಆದೇಶ ಹೊರಡಿಸಿದ್ದಾರೆ.

ಅಟ್ರಾಸಿಟಿ, ಸುಲಿಗೆ ಹಾಗೂ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುನಿರತ್ನ ವಿರುದ್ಧ ವಯ್ಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಮುನಿರತ್ನ ಜೈಲು ಸೇರಿದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read