ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ದಾಖಲಾಗಿದ್ದ ಆರು ಪ್ರಕರಣಗಳಲ್ಲಿ ಮೂರು ಪ್ರಕರಣಗಳಲ್ಲಿ ಬಿಗ್ ರಿಲೀಫ್ ಸಿಕ್ಕಿದೆ. ಮೂರು ಪ್ರಕರಣಗಳಲ್ಲಿ ಬಿ ರಿಪೋರ್ಟ್ ಸಲ್ಲಿಕೆ ಮಾಡಲಾಗಿದೆ.
ಸವಪಕ್ಷದ ಕಾರ್ಯಕರ್ತೆ ಮೇಲೆ ಅತ್ಯಾಚಾರ, ಜಾತಿ ನಿಂದನೆ ಸೇರಿದಂತೆ ಮುನಿರತ್ನ ವಿರುದ್ಧದ ಒಟ್ಟು ಆರು ಪ್ರಕರಣಲ್ಲಿ ತನಿಖೆ ನಡೆಸಿದ ಸಿಐಡಿ ಎಸ್ ಐಟಿ ಮೂರು ಪ್ರಕರಣಗಳಲ್ಲಿ ಸೂಕ್ತ ಸಾಕ್ಷಾಧಾರ ಕೊರತೆ ಹಿನ್ನೆಲೆಯಲ್ಲಿ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಮುನಿರತ್ನ ವಿರುದ್ಧದ ಅತ್ಯಾಚಾರ ಆರೋಪ ಕೇಸ್ ಗೂ ಮುಕ್ತಿ ಸಿಕ್ಕಿದೆ. 2025, ಮೇ 20ರಂದು 40 ವರ್ಷದ ಮಹಿಳೆ ಆರ್ ಎಂಸಿ ತ್ಯಾರ್ಡ್ ಪೊಲೀಸ್ ಠಾನೆಯಲ್ಲಿ ದೂರು ದಾಖಲಿಸಿದ್ದರು. ಶಾಸಕ ಮುನಿರತ್ನ ಸೇರಿದಂತೆ ಬೆಂಬಲಿಗರು ಗ್ಯಾಂಗ್ ರೇಪ್ ನಡೆಸಿದ್ದಾರೆ ಎಂದು ಆರೋಪಿಸಿದ್ದರು. ಈ ಬಗ್ಗೆ ಆರ್ ಎಂಸಿ ಯಾರ್ಡ್ ಠಾನೆ ಪೊಲೀಸರು ಎಫ್ ಐ ಆರ್ ದಾಖಲಿಸಿ ತನಿಖೆ ನಡೆಸಿದ್ದರು, ಬಳಿಕ ತನಿಖೆ ಸಿಐಡಿ ಎಸ್ ಐಟಿಗೆ ವರ್ಗಾಯಿಸಲಾಗಿತ್ತು.