HomeKarnatakaBIG NEWS: ಶಾಸಕ ಮುನಿರತ್ನ ಪ್ರಕರಣ: ತನಿಖೆಗೆ SIT ರಚಿಸುವಂತೆ ಸಿಎಂ ಸಿದ್ದರಾಮಯ್ಯಗೆ ಮನವಿ

BIG NEWS: ಶಾಸಕ ಮುನಿರತ್ನ ಪ್ರಕರಣ: ತನಿಖೆಗೆ SIT ರಚಿಸುವಂತೆ ಸಿಎಂ ಸಿದ್ದರಾಮಯ್ಯಗೆ ಮನವಿ

ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ಮಾಡಿರುವ ಜಾತಿ ನಿಂದನೆ, ಜೀವ ಬೆದರಿಕೆ ಪ್ರಕರಣ ಹಾಗೂ ಅತ್ಯಾಚಾರ, ಹನಿಟ್ರ್ಯಾಪ್ ಕೇಸ್ ತನಿಖೆಗೆ ಎಸ್ಐಟಿ ರಚನೆ ಮಾಡುವಂತೆ ಒತ್ತಾಯಿಸಿ ಒಕ್ಕಲಿಗ ಸಮುದಾಯದ ಸಚಿವರು, ಶಾಸಕರು, ನಾಯಕರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಮಾಡಿದರು.

ಸಿಎಂ ಸಿದ್ದರಾಮಯ್ಯ ಅವರ ಕಾವೇರಿ ನಿವಾಸದಲ್ಲಿ ಸಿಎಂ ಭೇಟಿಯಾದ ಸಚಿವ ಕೃಷ್ಣ ಬೈರೇಗೌಡ ನೇತೃತ್ವದ ನಿಯೋಗ, ಮುನಿರತ್ನ ವಿರುದ್ಧ ತನಿಖೆಗೆ ಎಸ್ಐಟಿ ರಚಿಸುವಂತೆ ಮನವಿ ಮಾಡಿದರು.

ಮುನಿರತ್ನ ವಿರುದ್ಧ ದಾಖಲಾಗಿರುವ ಎಲ್ಲಾ ಪ್ರಕರಣಗಳ ಬಗ್ಗೆಯೂ ಎಸ್ಐಟಿ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ. ಇದಕ್ಕೆ ಸ್ಪಂದಿಸಿದ ಸಿಎಂ ಸಿದ್ದರಾಮಯ್ಯ, ಗೃಹ ಸಚಿವರ ಜೊತೆ ಚರ್ಚಿಸಿ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular