HomeKarnatakaBIG NEWS: ಮುನಿರತ್ನ ಮೇಲೆ ಮೊಟ್ಟೆ ಎಸೆತ ಪ್ರಕರಣ: ಮೂವರು ಅರೆಸ್ಟ್

BIG NEWS: ಮುನಿರತ್ನ ಮೇಲೆ ಮೊಟ್ಟೆ ಎಸೆತ ಪ್ರಕರಣ: ಮೂವರು ಅರೆಸ್ಟ್

ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಕಿಡಿಗೇಡಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಪಲ್ಗೊಳ್ಳಲು ತೆರಳುತ್ತಿದ್ದ ವೇಳೆ ಶಾಸಕ ಮುನಿರತ್ನ ಮೇಲೆ ಮಹಾಲಕ್ಷ್ಮೀ ಲೇಔಟ್ ವ್ಯಾಪ್ತಿಯಲ್ಲಿ ಮೊಟ್ಟೆ ದಾಳಿ ನಡೆದಿದೆ. ಈ ವೇಳೆ ತಕ್ಷಣ ಸ್ಥಳದಲ್ಲಿದ್ದ ಪೊಲೀಸರು ಮುನಿರತ್ನ ಅವರನ್ನು ರಕ್ಷಿಸಿದ್ದಾರೆ.

ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಮುನಿರತ್ನ, ನನ್ನ ಕೊಲೆ ಯತ್ನ ನಡೆದಿದೆ. ಮೊಟ್ಟೆ ದಾಳಿಗೆ ಡಿ.ಕೆ.ಸಹೋದರರು, ಹನುಮಂತರಾಯಪ್ಪ, ಕುಸುಮಾ ಹಾಗೂ ಕೆಲ ರೌಡಿಗಳು ಕಾರಣ ಎಂದು ನೇರವಾಗಿ ಆರೋಪಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮುನಿರತ್ನ ಮೇಲೆ ಮೊಟ್ಟೆ ದಾಳಿ ಪ್ರಕರಣದ ಬಗ್ಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯಿಸಿದ್ದು, ಘಟನೆ ಸಂಬಂಧ ಈಗಾಗಲೇ ಮೂವರನ್ನು ಬಂಧಿಸಲಾಗಿದೆ ಎಂಬ ಮಾಹಿತಿ ಇದೆ. ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular