HomeKarnatakaBREAKING NEWS: ಬಿಜೆಪಿ ಶಾಸಕ ಮುನಿರತ್ನ ಪರಪ್ಪನ ಅಗ್ರಹಾರ ಜೈಲು ಪಾಲು

BREAKING NEWS: ಬಿಜೆಪಿ ಶಾಸಕ ಮುನಿರತ್ನ ಪರಪ್ಪನ ಅಗ್ರಹಾರ ಜೈಲು ಪಾಲು

ಬೆಂಗಳೂರು: ಗುತ್ತಿಗೆದಾರನಿಗೆ ಜೀವ ಬೆದರಿಕೆ, ಜಾತಿ ನಿಂದನೆ ಆರೋಪದಲ್ಲಿ ಬಂಧನಕ್ಕೀಡಾಗಿರುವ ಬಿಜೆಪಿ ಶಾಸಕ ಮುನಿರತ್ನ, ಇದೀಗ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ.

ಜೀವ ಬೆದರಿಕೆ, ಜಾತಿ ನಿಂದನೆ ಕೇಸ್ ನಲ್ಲಿ ಎರಡು ದಿನ ಪೊಲೀಸ್ ಕಷ್ಟಡಿಗೆ ಪಡೆದಿದ್ದ ಪೊಲೀಸರು, ಇಂದು ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ 82ನೇ ಸಿಸಿಹೆಚ್ ಕೋರ್ಟ್ ಗೆ ಹಾಜರು ಪಡಿಸಿದ್ದರು. ಈ ವೇಳೆ ಮುನಿರತ್ನ ಪರ ವಕೀಲರು ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಆದರೆ ಕೋರ್ಟ್ ಒಂದು ದಿನದವರೆಗೆ ಮುನಿರತ್ನ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿದೆ.

ನ್ಯಾಯಾಂಗ ಬಂಧನ ಹಿನ್ನೆಲೆಯಲ್ಲಿ ಪೊಲೀಸರು ಮುನಿರತ್ನ ಅವರನ್ನು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಿದ್ದು, ಮುನಿರತ್ನ ಜೈಲು ಸೇರಿದ್ದಾರೆ. ನಾಳೆ ಮುನಿರತ್ನ ಅವರಿಗೆ ಜಾಮೀನು ಸಿಗಲಿದೆಯೇ? ಕಾದು ನೋಡಬೇಕಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular