HomeKarnatakaBIG NEWS: ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಪ್ರಕರಣ: ವಿಕಾಸಸೌಧಕ್ಕೆ ಸಂತ್ರಸ್ಥೆ ಕರೆತಂದು ಸ್ಥಳ ಮಹಜರು

BIG NEWS: ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಪ್ರಕರಣ: ವಿಕಾಸಸೌಧಕ್ಕೆ ಸಂತ್ರಸ್ಥೆ ಕರೆತಂದು ಸ್ಥಳ ಮಹಜರು

ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಎಸ್ಐಟಿ ಅಧಿಕಾರಿಗಳು ಸಂತ್ರಸ್ತೆಯನ್ನು ವಿಕಾಸಸೌಧಕ್ಕೆ ಕರೆತಂದು ಸ್ಥಳ ಮಹಜರು ನಡೆಸಿದ್ದಾರೆ.

ಬೆಳಿಗ್ಗೆ 11 ಗಂಟೆಗೆ ವೇಳೆಗೆ ಸಂತ್ರಸ್ತೆಯನ್ನು ವಿಕಾಸಸೌಧಕ್ಕೆ ಕರೆತಂದ ಎಸ್ಐಟಿ ಅಧಿಕಾರಿಗಳು ಮೂರನೆ ಮಹಡಿಯ 334ನೇ ಕೋಣೆಯಲ್ಲಿ ಸ್ಥಳ ಮಹಜರು ನಡೆಸಿದರು.

ಹಿಂದೆ ಮುನಿರತ್ನ ತೋಟಗಾರಿಕಾ ಸಚಿವರಾಗಿದ್ದ ಸಂದರ್ಭದಲ್ಲಿ ಮುನಿರತ್ನಗೆ ನೀಡಿದ್ದ ಕೊಠಡಿ ಇದಾಗಿದೆ. ಯಾವ ಸ್ಥಳದಲ್ಲಿ ಮುನಿರತ್ನ ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಎಂಬ ಬಗ್ಗೆ ಸಂತ್ರಸ್ತೆಯಿಂದ ಲಿಖಿತ ಹಾಗೂ ಮೌಖಿಕ ಹೇಳಿಕೆ ಪಡೆದುಕೊಂಡು, ಸ್ಥಳ ಮಹಜರು ಪ್ರಕ್ರಿಯೆ ವಿಡಿಯೋ ಮಾಡಿಕೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಳಿಕ ಸಿಐಡಿ ಕಚೇರಿಗೆ ಸಂತ್ರಸ್ತೆ ಕರೆದೊಯ್ದು ವಿಚಾರಣೆ ನಡೆಸಿ ಕಳುಹಿಸಿಕೊಡಲಾಗಿದೆ ಎಂದು ತಿಳಿದುಬಂದಿದೆ.

 

For Latest News Updates, Join Our Whatsapp Community🚩
RELATED ARTICLES

Most Popular