ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಬೆಂಗಳೂರು ನಡಿಗೆ ಕಾರ್ಯಕ್ರಮದ ವೇಳೆ ಹೈಡ್ರಾಮಾ ಸೃಷ್ಟಿಸಿದ್ದ ಬಿಜೆಪಿ ಶಾಸಕ ಮುನಿರತ್ನ ಇದೀಗ ಮತ್ತೊಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ಮೇಲೆ ಮಾಟ ಮಂತ್ರ ಆಗಿದೆ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುನಿರತ್ನ, ಸಿದ್ದರಾಮಯ್ಯ ವಿರುದ್ಧ ಮಾಟ ಮಂತ್ರ ಮಾಡಲಾಗಿದೆ. ಡಬ್ಬದಲ್ಲಿ ಹಾಕಿ ವಶೀಕರಣ ಮಾಡಿದ್ದಾರೆ. ಇದಕ್ಕಾಗಿ ಕೋಣ ಬಲಿಕೊಟ್ಟಿದ್ದಾರೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ಮಂಕಾಗಿದ್ದಾರೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ.
ಇನ್ನು ಹೆಚ್.ಡಿ.ಕುಮಾರಸ್ವಾಮಿ ವಿರುದ್ಧವೂ ಮಾಟ ಮಂತ್ರ ಮಾಡಿದ್ದಾರೆ. ಅದಕ್ಕೆ ಅವರಿಗೆ ಆರೋಗ್ಯ ಸರಿಯಿಲ್ಲ ಎಂದು ಪರೋಕ್ಷವಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.