HomeKarnatakaದೇಗುಲದಲ್ಲೇ ಹತ್ಯೆ: ಅನೈತಿಕ ಸಂಬಂಧದ ಶಂಕೆಯಿಂದ ಮಲಗಿದಲ್ಲೇ ವ್ಯಕ್ತಿ ಬರ್ಬರ ಕೊಲೆ

ದೇಗುಲದಲ್ಲೇ ಹತ್ಯೆ: ಅನೈತಿಕ ಸಂಬಂಧದ ಶಂಕೆಯಿಂದ ಮಲಗಿದಲ್ಲೇ ವ್ಯಕ್ತಿ ಬರ್ಬರ ಕೊಲೆ

ಮೈಸೂರು: ಅನೈತಿಕ ಸಂಬಂಧ ಆರೋಪ ಹಿನ್ನೆಲೆಯಲ್ಲಿ ವ್ಯಕ್ತಿಯನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಹೊಸಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.

ಮಚ್ಚಿನಿಂದ ಹಲ್ಲೆ ನಡೆಸಿ 39 ವರ್ಷದ ಮಹದೇವಸ್ವಾಮಿಯನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಗ್ರಾಮದ ಮಾರಮ್ಮನ ದೇವಾಲಯದಲ್ಲಿ ಮಹದೇವಸ್ವಾಮಿ ಮಲಗಿದ್ದ ವೇಳೆ ಆರೋಪಿ ಸೋಮಯ್ಯ ಕೊಲೆ ಮಾಡಿ ಪರಾರಿಯಾಗಿದ್ದಾನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸೋಮಯ್ಯನ ಪತ್ನಿಯೊಂದಿಗೆ ಮಹಾದೇವಸ್ವಾಮಿ ಅಕ್ರಮ ಸಂಬಂಧ ಹೊಂದಿದ ಆರೋಪ ಕೇಳಿ ಬಂದಿದೆ. ಇದೇ ವಿಚಾರಕ್ಕೆ ಮಹದೇವಸ್ವಾಮಿಯನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ನಂಜನಗೂಡು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular