ಶವ ಪರೀಕ್ಷೆಯಲ್ಲಿ ಬಯಲಾಯ್ತು ಅಸಲಿಯತ್ತು: ಪ್ರಿಯಕರನೊಂದಿಗೆ ಸೇರಿ ಪತಿ ಕೊಂದ ಪತ್ನಿ ಅರೆಸ್ಟ್

ಬೆಂಗಳೂರು: ಪ್ರಿಯಕರನೊಂದಿಗೆ ಸೇರಿ ಗಂಡನನ್ನು ಉಸಿರುಗಟ್ಟಿಸಿ ಕೊಂದು ಆತ್ಮಹತ್ಯೆ ಕಥೆ ಕಟ್ಟಿದ್ದ ಪತ್ನಿ ಮತ್ತು ಆಕೆಯ ಪ್ರಿಯಕರನನ್ನು ಕಾಡುಗೋಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬಾತ್ ರೂಮ್ ನಲ್ಲಿ ಕೈಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡಂತೆ ಬಿಂಬಿಸಲು ಯತ್ನಿಸಿದ್ದರು. ಶವ ಪರೀಕ್ಷೆಯಲ್ಲಿ ಸತ್ಯ ಬಯಲಾಗಿ ಇಬ್ಬರು ಜೈಲು ಸೇರಿದ್ದಾರೆ. ದೊಡ್ಡಬಳ್ಳಾಪುರ ಮೂಲದ ಮಮತಾ ಹಾಗೂ ಆಕೆಯ ಪ್ರಿಯಕರ ಹರೀಶ್ ಬಂಧಿತ ಆರೋಪಿಗಳು. ಆನಂದ್ ಕೊಲೆಯಾದ ವ್ಯಕ್ತಿ. ಮಾರ್ಚ್ 21ರಂದು ಕಾಡುಗೋಡಿ ಶಂಕರಪುರದ ಮನೆಯ ಬಾತ್ರೂಮ್ ನಲ್ಲಿ ಆನಂದ್ ಶವ ಪತ್ತೆಯಾಗಿತ್ತು. ಚಾಕುವಿನಿಂದ ಕೈ ಕೊಯ್ದುಕೊಂಡು ಸಾವನ್ನಪ್ಪಿದ ರೀತಿಯಲ್ಲಿ ಮೃತ ದೇಹ ಕಂಡುಬಂದಿದ್ದು, ಪೊಲೀಸರು ಮರಣೋತ್ತರ ಪರೀಕ್ಷೆಗೆ ಮೃತ ದೇಹ ರವಾನಿಸಿದ್ದರು.

ಮಗನ ಸಾವಿನ ಬಗ್ಗೆ ಆನಂದ್ ತಂದೆ ಮುನಿರಾಜು ಅನುಮಾನ ವ್ಯಕ್ತಪಡಿಸಿದ್ದರು. ಪೊಲೀಸರು ತನಿಖೆ ಕೈಗೊಂಡಿದ್ದು, ಮರಣೋತ್ತರ ಪರೀಕ್ಷೆ ಪ್ರಾಥಮಿಕ ವರದಿಯಲ್ಲಿ ಆನಂದ್ ಗೆ ನಿದ್ದೆ ಮಾತ್ರೆ ನೀಡಿ ಬಳಿಕ ಉಸಿರುಗಟ್ಟಿಸಿ ಕೊಲೆ ಮಾಡಲಾಗಿದೆ ಎನ್ನುವುದು ಗೊತ್ತಾಗಿದೆ.

ಮಮತಾಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಪ್ರಿಯಕರನೊಂದಿಗೆ ಜೀವನ ಮಾಡಲು ಇಚ್ಚಿಸಿದ್ದು ಆನಂದ್ ಕೊಲೆಗೆ ಸಂಚು ರೂಪಿಸಿದ್ದಾಗಿ ಹೇಳಿದ್ದಾಳೆ. ಪೊಲೀಸರು ಮಮತಾ ಮತ್ತು ಹರೀಶ್ ಮೊಬೈಲ್ ಕರೆಗಳ ವಿವರ ಪರಿಶೀಲಿಸಿದಾಗ ಇಬ್ಬರು ನಿರಂತರ ಸಂಪರ್ಕದಲ್ಲಿರುವುದು ಗೊತ್ತಾಗಿದೆ. ಊಟದಲ್ಲಿ ನಿದ್ದೆ ಮಾತ್ರೆ ಬೆರೆಸಿಕೊಟ್ಟು ಮೃತ ದೇಹವನ್ನು ರೈಲು ಹಳಿಯ ಮೇಲೆ ಎಸೆಯಲು ಸಂಚುರೂಪಿಸಿದ್ದರು. ಆನಂದ್ ಜಾಸ್ತಿ ತೂಕವಿದ್ದ ಕಾರಣ ಶವ ಸಾಗಿಸಲು ಸಾಧ್ಯವಾಗದೆ ಮನೆಯಲ್ಲಿ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾರೆ. ನಂತರ ಮೃತ ದೇಹವನ್ನು ಬಾತ್ರೂಮ್ ನಲ್ಲಿರಿಸಿ ಕೈ ಕೊಯ್ದುಕೊಂಡು ಆತ್ಮಹತ್ಯೆಗೆ ಶರಣಾದಂತೆ ಬಿಂಬಿಸಿದ್ದಾರೆ. ಇಬ್ಬರು ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read