ಬಳ್ಳಾರಿಯಲ್ಲಿ ಬೆಚ್ಚಿಬೀಳಿಸುವ ಘಟನೆ: ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿ ಬರ್ಬರ ಹತ್ಯೆ

ಬಳ್ಳಾರಿಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ, ಬಳ್ಳಾರಿ ಹೊರವಲಯದ ಗುಗ್ಗರಹಟ್ಟಿಯಲ್ಲಿ ಘಟನೆ ನಡೆದಿದೆ.

40ವರ್ಷದ ಮೆಹಬೂಬ್ ಪಾಷಾ ಕೊಲೆಯಾದ ವ್ಯಕ್ತಿ ಎಂದು ಹೇಳಲಾಗಿದೆ. ಪಾಷಾ ಮೇಲೆ ದುಷ್ಕರ್ಮಿಗಳು ದಾಳಿ ಮಾಡಿ ಮಾರಕಾಸ್ತ್ರಗಳಿಂದ ಥಳಿಸಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯದಲ್ಲೇ ಸಾವನ್ನಪ್ಪಿದ್ದಾರೆ. ರಿಯಲ್ ಎಸ್ಟೇಟ್ ವಿಚಾರವಾಗಿ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read